ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಶ್ಮೀರ ಪರದೇಶಿ 
ಸಿನಿಮಾ ಸುದ್ದಿ

ನಿಖಿಲ್ ನಟನೆಯ 'ರೈಡರ್' ಡಿಸೆಂಬರ್ 24ಕ್ಕೆ ಬಿಡುಗಡೆ

ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಚಿತ್ರ ಡಿ.24ಕ್ಕೆ ಬಿಡುಗಡೆಯಾಗಲಿದೆ.

ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಚಿತ್ರ ಡಿ.24ಕ್ಕೆ ಬಿಡುಗಡೆಯಾಗಲಿದೆ.

ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ಅವರ ಕನ್ನಡದ ಚೊಚ್ಚಲ ಕಮರ್ಷಿಯಲ್ ಎಂಟರ್‌ಟೈನರ್ ಚಿತ್ರ ರೈಡರ್ ಡಿಸೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ವಿವಿಧ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಈ ಹಿಂದೆ ನಡೆಸಿದ್ದ ಸಂದರ್ಶನದಲ್ಲಿ ಮಾತನಾಡಿದ್ದ ನಿಖಿಲ್ ಅವರು, ರೈಡರ್ ಕ್ರೀಡೆ ಆಧಾರಿತ ಮನರಂಜನಾತ್ಮಕ ಚಿತ್ರವಾಗಿದೆ ಎಂದು ಹೇಳಿದ್ದರು.

ನಿಖಿಲ್ ಕುಮಾರ್, ಕಶ್ಮೀರ ಪರದೇಶಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಸಿನಿಮಾವನ್ನು ಲಹರಿ ಪ್ರೊಡಕ್ಷನ್ಸ್‌ ಹಾಗೂ ಶಿವನಂದಿ ಎಂಟ್ರೈನ್‌ಮೆಂಟ್ಸ್ ನಿರ್ಮಾಣ ಮಾಡಿದೆ. ಸ್ಪೋರ್ಟ್ಸ್‌ ಆ್ಯಕ್ಷನ್‌ ಡ್ರಾಮಾ ಕಥಾಹಂದರವನ್ನು ಚಿತ್ರವು ಹೊಂದಿದ್ದು, ತೆಲುಗಿನ ವಿಜಯ್‌ ಕುಮಾರ್‌ ಕೊಂಡ ಇದಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ತೆಲುಗಿನ ‘ಒಕ್ಕಾ ಲೈಲಾ ಕೋಸಂ’ ಮತ್ತು ‘ಗುಂಡೆ ಜಾರಿ ಗಲ್ಲನ್‌ಥೈಯಿಂದೆ’ ಸಿನಿಮಾಗಳನ್ನು ನಿರ್ದೇಶಿಸಿದ ಖ್ಯಾತಿ ವಿಜಯ್‌ ಅವರದ್ದು. ಚಿತ್ರದಲ್ಲಿ ನಿಖಿಲ್‌ ಅವರದ್ದು ಬ್ಯಾಸ್ಕೆಟ್‌ಬಾಲ್‌ ಆಟಗಾರನ ಪಾತ್ರ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ಶ್ರೀಶ ಕೂದುವಳ್ಳಿ ಅವರ ಛಾಯಾಗ್ರಹಣವಿದೆ. ಸಂಪದ, ದತ್ತಣ್ಣ, ಅಚ್ಯುತ್‌ಕುಮಾರ್‌, ಚಿಕ್ಕಣ್ಣ, ಶಿವರಾಜ್‌ ಕೆ.ಆರ್‌. ಪೇಟೆ ತಾರಾಗಣದಲ್ಲಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT