ಅಮೀರ್ ಖಾನ್ 
ಸಿನಿಮಾ ಸುದ್ದಿ

ರಾಕಿಂಗ್ ಸ್ಟಾರ್ ಯಶ್, ಕೆಜಿಎಫ್-2 ನಿರ್ದೇಶಕ ಪ್ರಶಾಂತ್ ನೀಲ್ ಬಳಿ ಅಮೀರ್ ಖಾನ್ ಕ್ಷಮೆಯಾಚನೆ!

ಕೆಜಿಎಫ್‌ 2 ಬಿಡುಗಡೆಯಾಗುವ ದಿನವೇ ಅಮೀರ್‌ ಖಾನ್‌ ನಟನೆಯ 'ಲಾಲ್‌ಸಿಂಗ್‌ ಛಡ್ಡಾ' ಚಿತ್ರವೂ ಬಿಡುಗಡೆಯಾಗಲಿದೆ. ಎರಡು ಬಿಗ್ ಬಜೆಟ್‌ ಸಿನಿಮಾಗಳಲ್ಲಿ ಪ್ರೇಕ್ಷಕ ಯಾವುದನ್ನು ಆರಿಸಿಕೊಳ್ಳಬಹುದು ಅನ್ನುವುದು ಸದ್ಯದ ಕುತೂಹಲ.

ಯಶ್‌ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ಕೆಜಿಎಫ್‌ 2'  ಏ.14ರಂದು ಥಿಯೇಟರ್‌ನಲ್ಲಿ ಅಬ್ಬರಿಸಲಿದೆ. ಪ್ರಶಾಂತ್‌ ನೀಲ್‌ ನಿರ್ದೇಶನದಲ್ಲಿ ವಿಜಯ್‌ ಕಿರಗಂದೂರು ನಿರ್ಮಾಣದಲ್ಲಿ ಮೂಡಿ ಬಂದಿರುವ ಚಿತ್ರವಿದು. ಕೆಜಿಎಫ್‌ನ ಮೊದಲ ಭಾಗ 21 ಡಿಸೆಂಬರ್‌ 2018ರಲ್ಲಿ ತೆರೆಗೆ ಬಂದಿತ್ತು. ಆ ಸಿನಿಮಾ ಇಡೀ ದೇಶದಲ್ಲೇ ಪ್ರಚಂಡ ಗೆಲುವು ಕಂಡಿತ್ತು.

ಸದ್ಯದ ವಿಷಯವೆಂದರೇ ಕೆಜಿಎಫ್‌ 2 ಬಿಡುಗಡೆಯಾಗುವ ದಿನವೇ ಅಮೀರ್‌ ಖಾನ್‌ ನಟನೆಯ 'ಲಾಲ್‌ಸಿಂಗ್‌ ಛಡ್ಡಾ' ಚಿತ್ರವೂ ಬಿಡುಗಡೆಯಾಗಲಿದೆ. ಎರಡು ಬಿಗ್ ಬಜೆಟ್‌ ಸಿನಿಮಾಗಳಲ್ಲಿ ಪ್ರೇಕ್ಷಕ ಯಾವುದನ್ನು ಆರಿಸಿಕೊಳ್ಳಬಹುದು ಅನ್ನುವುದು ಸದ್ಯದ ಕುತೂಹಲ.

ಆದರೆ ಅಮೀರ್‌ ಖಾನ್‌ನಂಥಾ ಅಮೀರ್‌ ಖಾನ್‌ಗೆ ಕೊಂಚ ಗೊಂದಲ ಶುರುವಾದಂತಿದೆ. ಕೆಜಿಎಫ್‌ 2ನ ಎದುರು ತನ್ನ ಸಿನಿಮಾ ನಿಲ್ಲಬಹುದಾ ಎಂಬ ಸಣ್ಣ ಅನುಮಾನ ಬಂದ ಹಾಗಿದೆ. ಹೀಗಾಗಿಯೇ ಅವರು ಕೆಜಿಎಫ್‌ 2 ಬಿಡುಗಡೆ ದಿನಾಂಕ ಮುಂದೂಡಲು ಸಾಧ್ಯವೇ ಎಂದು ಚಿತ್ರತಂಡದ ಜೊತೆಗೆ ಚರ್ಚೆ ಮಾಡಿದ್ದಾರೆ.

ಕೆಜಿಎಫ್ ಚಾಪ್ಟರ್-2 ರಿಲೀಸ್ ದಿನವೇ `ಲಾಲ್ ಸಿಂಗ್ ಚಡ್ಡಾ’ ಸಿನಿಮಾವನ್ನೂ ರಿಲೀಸ್ ಮಾಡುತ್ತಿರುವುದಕ್ಕೆ ಅಮೀರ್ ಖಾನ್ ಕೆಜಿಎಫ್‍ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ರಾಕಿಂಗ್ ಸ್ಟಾರ್ ಯಶ್‍ಗೆ ಟೆಕ್ಟ್ಸ್ ಮೆಸೇಜ್ ಮಾಡಿ ಕ್ಷಮೆ ಕೇಳಿದ್ದಾರೆ.

ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅಮೀರ್, ನಾನು ಬೇರೆಯವರನ್ನು ಅತಿಕ್ರಮಿಸಿಕೊಳ್ಳುತ್ತಿದ್ದೇನೆ ಎಂಬ ಭಾವನೆ ಸೃಷ್ಟಿ ಆಗುವುದನ್ನು ದ್ವೇಷಿಸುತ್ತೇನೆ, ಆದರೆ ನಾನು ಮೊದಲ ಬಾರಿಗೆ ಸಿಖ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಾರಣ ಏಪ್ರಿಲ್ 14ರಂದು ಬೈಸಾಖಿ ದಿನ ಸಿನಿಮಾ ರಿಲೀಸ್ ಮಾಡುವುದು ಸೂಕ್ತ ಎಂದು ಭಾವಿಸಿದ್ದೆ. ಹೀಗಾಗಿ ನಾನು ಕೆಜಿಎಫ್ ನಿರ್ಮಾಪಕ ವಿಜಯ್‌ ಕಿರಗಂದೂರು, ನಿರ್ದೇಶಕ ಪ್ರಶಾಂತ್‌ ನೀಲ್ ಮತ್ತು ಯಶ್ ಅವರಲ್ಲಿ ಕ್ಷಮೆ ಕೇಳಿದ್ದೇನೆ ಎಂದಿದ್ದಾರೆ.

ಬೈಸಾಖಿ ದಿನ ನನ್ನ ಸಿನಿಮಾ ಬಿಡುಗಡೆಯಾದರೆ ಸೂಕ್ತ ಎಂದು ಅವರಿಗೆ ತಿಳಿಸಿದೆ. ಅವರು ನನ್ನ ಅಭಿಪ್ರಾಯವನ್ನು ಒಪ್ಪಿಕೊಂಡರು. ಅವರ ಸಿನಿಮಾ ರಿಲೀಸ್ ಇದ್ದರೂ ಅದೇ ನೀವು ಸಿನಿಮಾ ಬಿಡುಗಡೆ ಮಾಡಿ ಎಂದು ನನಗೆ ಹೇಳಿದರು. ಅವರ ಸ್ಪಂದನೆ ನನಗೆ ಇಷ್ಟ ಆಯಿತು. ನನ್ನ ಯೋಚನೆಗೆ ಯಶ್ ತುಂಬಾ ಬೆಂಬಲವಾಗಿ ನಿಂತರು ಎಂದು ಅಮೀರ್ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್