ರಜಿನಿ 
ಸಿನಿಮಾ ಸುದ್ದಿ

ಕಿರುತೆರೆಯಿಂದ ಬೆಳ್ಳಿತೆರೆಗೆ ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ ಹೈಜಂಪ್: 'ಅಂಬುಜಾ' ಹಾರರ್ ಥ್ರಿಲ್ಲರ್ ಸಿನಿಮಾದಲ್ಲಿ ನಟನೆ

ರಜಿನಿ, 'ಅಂಬುಜಾ' ಎನ್ನುವ ನೈಜ ಘಟನೆಯಾಧಾರಿತ ನಾಯಕಿ ಪ್ರಧಾನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶ್ರೀನಿ ಹನುಮಂತರಾಜು ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. 

ಕಿರುತೆರೆಯಲ್ಲಿ ಹೆಸರು ಮಾಡಿ ಈಗ ಬೆಳ್ಳಿಪರದೆಯಲ್ಲಿ ತಮ್ಮ ಅದೃಷ್ಟಪರೀಕ್ಷೆಗೆ ಮುಂದಾಗಿರುವವರ ಸಾಲಿಗೆ ಧಾರಾವಾಹಿ ನಟಿ ರಜಿನಿ ಸೇರ್ಪಡೆಗೊಂಡಿದ್ದಾರೆ. 

ಅಮೃತವರ್ಷಿಣಿ ಧಾರಾವಾಹಿಯಿಂದ ಜನಪ್ರಿಯತೆ ಪಡೆದುಕೊಂಡಿರುವ ರಜಿನಿ, 'ಅಂಬುಜಾ' ಎನ್ನುವ ನೈಜ ಘಟನೆಯಾಧಾರಿತ ನಾಯಕಿ ಪ್ರಧಾನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶ್ರೀನಿ ಹನುಮಂತರಾಜು ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. 

ಹಾರರ್- ಥ್ರಿಲ್ಲರ್ ಸಿನಿಮಾ ಆಗಿರುವ 'ಅಂಬುಜಾ'ದಲ್ಲಿ ರಜಿನಿ ಅವರು ನಟಿ ಶುಭಾ ಪೂಂಜಾ ಜೊತೆ ಪರದೆ ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗಿ ಪ್ರಸನ್ನ ಕುಮಾರ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಮುರಳೀಧರ್ ಅವರು ಸಿನಿಮೆಟೊಗ್ರಫಿ ಹೊಣೆ ನಿರ್ವಹಿಸುತ್ತಿದ್ದಾರೆ. ಸಿನಿಮಾದಲ್ಲಿ ಪದ್ಮಜಾ ರಾವ್, ಗೋವಿಂದ ಗೌಡ, ದೀಪಕ್ ಸುಬ್ರಮಣ್ಯ ಮತ್ತು ಸಂದೇಶ್ ಶೆಟ್ಟಿ ತಾರಾಗಣದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್