ಶ್ರುತಿ ಹರಿಹರನ್ 
ಸಿನಿಮಾ ಸುದ್ದಿ

#MeToo ನಟಿ ಶ್ರುತಿ ಹರಿಹರನ್​ಗೆ ಕಬ್ಬನ್ ಪಾರ್ಕ್ ಪೊಲೀಸರಿಂದ ನೋಟಿಸ್​ ಜಾರಿ

ಸ್ಯಾಂಡಲ್​ವುಡ್​ನಲ್ಲಿ ಭಾರೀ ಸದ್ದು ಮಾಡಿದ್ದ ‘ಮೀಟೂ’ ಪ್ರಕರಣಕ್ಕೆ ಸಂಬಂಧಿಸಿ ನಟಿ ಶ್ರುತಿ ಹರಿಹರನ್​ಗೆ ಕಬ್ಬನ್​ ಪಾರ್ಕ್​ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಭಾರೀ ಸದ್ದು ಮಾಡಿದ್ದ ‘ಮೀಟೂ’ ಪ್ರಕರಣಕ್ಕೆ ಸಂಬಂಧಿಸಿ ನಟಿ ಶ್ರುತಿ ಹರಿಹರನ್​ಗೆ ಕಬ್ಬನ್​ ಪಾರ್ಕ್​ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಈ ಹಿಂದೆ ದೌರ್ಜನ್ಯ ಆರೋಪ ಮಾಡಿದ್ದರು. ಈ ಸಂಬಂಧ 2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರು ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ 354,354a ಮತ್ತು 506 ಐಪಿಸಿ ಅಡಿ ಕೇಸ್ ದಾಖಲು ಆಗಿತ್ತು. ತನಿಖೆ ವೇಳೆ ಯಾವೂದೇ ಸಾಕ್ಷ ಸಿಗದ ಹಿನ್ನೆಲೆ ಪೊಲೀಸರು ನ್ಯಾಯಾಲಯಕ್ಕೆ 'ಬಿ'ರಿಪೋರ್ಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಮೂರು ವರ್ಷದ ಬಳಿಕ ಪ್ರಕರಣದ ತನಿಖೆಯು ಇದೀಗ ಅಂತಿಮ ‌ಹಂತಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣ ಸಂಬಂಧ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಟಿ ಶ್ರುತಿ ಹರಿಹರನ್ ಅವರಿಗೆ ನೋಡಿಸ್ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಮೂರು ದಿನಗಳ ಒಳಗಾಗಿ ತನಿಖಾಧಿಕಾರಿಗಳು ಮುಂದ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್