ಸುಧಾಮೂರ್ತಿ 
ಸಿನಿಮಾ ಸುದ್ದಿ

ರಮೇಶ್ ಅರವಿಂದ್ ನಿರ್ದೇಶನದ '100' ಸಿನಿಮಾ ಮೆಚ್ಚಿ ಹೊಗಳಿದ ಸುಧಾ ಮೂರ್ತಿ!

ಇತ್ತೀಚೆಗೆ ಬಿಡುಗಡೆಯಾಗಿರುವ ರಮೇಶ್ ಅರವಿಂದ್ ನಿರ್ದೇಶನದ 100 ಸಿನಿಮಾ ಬಗ್ಗೆ ಉದ್ಯಮಿ ಹಾಗೂ ಲೇಖಕಿ ಸುಧಾಮೂರ್ತಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾಗಿರುವ ರಮೇಶ್ ಅರವಿಂದ್ ನಿರ್ದೇಶನದ 100 ಸಿನಿಮಾ ಬಗ್ಗೆ ಉದ್ಯಮಿ ಹಾಗೂ ಲೇಖಕಿ ಸುಧಾಮೂರ್ತಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಈ ಸಂಬಂಧ ವಿಡಿಯೋ ಸಂದೇಶ ನೀಡಿರುವ ಸುಧಾಮೂರ್ತಿ, ನಾನು ಇವತ್ತು ‘100’ ಚಲನಚಿತ್ರ ನೋಡಿದೆ. ರಮೇಶ್ ಅರವಿಂದ್ ಇದರಲ್ಲಿ ನಟಿಸಿದ್ದಾರೆ. ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಈ ಸಿನಿಮಾ ಬಹಳ ಚೆನ್ನಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಜನರು ಫೋನ್ ಮತ್ತು ಕಂಪ್ಯೂಟರ್‌ಗೆ ತುಂಬಾ ಅಡಿಕ್ಟ್ ಆಗಿದ್ದಾರೆ. ಫೇಸ್‌ಬುಕ್‌ನಲ್ಲಿ ಫ್ರೆಂಡ್‌ಶಿಪ್ ಮಾಡಿಕೊಳ್ಳುತ್ತಾರೆ.

 ಗೆಳೆತನ ಮಾಡಿಕೊಳ್ಳುವುದು ತಪ್ಪಲ್ಲ. ಆದರೆ, ಅಪರಿಚಿತ ವ್ಯಕ್ತಿಯ ಬಳಿ ತಮ್ಮ ಅಂತರಂಗವನ್ನು ಹೇಳುವುದು, ಇದರಿಂದ ಪರಿವಾರಕ್ಕೆ ಏನು ತೊಂದರೆಯಾಗಬಹುದು ಎಂಬುದರ ಬಗ್ಗೆ ಸಿನಿಮಾ ಮಾಡಿದ್ದಾರೆ. ಇದು ನಿಜಕ್ಕೂ ಅತ್ಯುತ್ತಮ ಸಿನಿಮಾ. ಇತ್ತೀಚಿನ ದಿನಗಳಲ್ಲಿ ಈ ತರಹದ ಸಿನಿಮಾಗಳು ಬಂದಿರುವುದು ಬಹಳ ಕಡಿಮೆ.

ನಾನು ಈ ಚಿತ್ರವನ್ನು ತುಂಬಾ ಎಂಜಾಯ್ ಮಾಡಿದ್ದೇನೆ. ಕುಟುಂಬ ಕೂತು ಈ ಚಿತ್ರವನ್ನು ನೋಡಿ ಎಂಜಾಯ್ ಮಾಡಬಹುದು. ಜೊತೆಗೆ ಈ ಚಿತ್ರದಿಂದ ಕಲಿಯುವುದು ತುಂಬಾ ಇದೆ. ಎಲ್ಲರೂ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ’’ ಎಂದು ಸುಧಾ ಮೂರ್ತಿ ಹೇಳಿರುವ ವಿಡಿಯೋವನ್ನು ನಿರ್ಮಾಪಕ ರಮೇಶ್ ರೆಡ್ಡಿ  ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನವೆಂಬರ್ 19 ರಂದು ಕನ್ನಡದಲ್ಲಿ 100 ಸಿನಿಮಾ ರಿಲೀಸ್ ಆಗಿದೆ. ಡಿಸೆಂಬರ್ ನಲ್ಲಿ ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ತೆಲುಗಿನ ಇಬ್ಬರು ವಿತರಕರ ಜೊತೆ ಚರ್ಚಿಸಿದ್ದು ಹಲವು ಥಿಯೇಟರ್ ಗಳಲ್ಲಿ ರಿಲೀಸ್ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT