ಅನುರಾಧಾ 
ಸಿನಿಮಾ ಸುದ್ದಿ

ಹೈದರಾಬಾದ್: ತೆಲುಗು ನಟಿ ಅನುರಾಧಾ ಆತ್ಮಹತ್ಯೆಗೆ ಶರಣು

ತೆಲುಗು ಸಿನಿಮಾಗಳಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ ನಟಿಸುತ್ತಿದ್ದ ಅನುರಾಧಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್‌ನ ಫಿಲ್ಮ್ ನಗರ್‌ನಲ್ಲಿ ಅನುರಾಧಾ ನೇಣಿಗೆ ಶರಣಾಗಿದ್ದಾರೆ.

ತೆಲುಗು ಸಿನಿಮಾಗಳಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ ನಟಿಸುತ್ತಿದ್ದ ಅನುರಾಧಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್‌ನ ಫಿಲ್ಮ್ ನಗರ್‌ನಲ್ಲಿ ಅನುರಾಧಾ ನೇಣಿಗೆ ಶರಣಾಗಿದ್ದಾರೆ.

ಹೈದರಾಬಾದ್‌ನ ಫಿಲ್ಮ್‌ ನಗರ್‌ನಲ್ಲಿರುವ ಗ್ಯಾನಿ ಜೈಲ್ ಸಿಂಗ್ ನಗರದಲ್ಲಿನ ತಮ್ಮ ನಿವಾಸದಲ್ಲಿ ಅನುರಾಧಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನುರಾಧಾ ಕಳೆದ ನಾಲ್ಕು ದಿನಗಳಿಂದ ಮನೆಯಿಂದ ಹೊರಬಂದಿರಲಿಲ್ಲ. ಸಾಲದಕ್ಕೆ, ಅನುರಾಧಾ ನಿವಾಸದಿಂದ ವಾಸನೆ ಬರುತ್ತಿತ್ತು. ಇದನ್ನು ಗಮನಿಸಿದ ಅಕ್ಕ-ಪಕ್ಕದವರು ಮನೆಯ ಮಾಲೀಕರ ಗಮನಕ್ಕೆ ತಂದರು. ಬಳಿಕ ಪೊಲೀಸರಿಗೂ ಮಾಹಿತಿ ನೀಡಲಾಯಿತು. ಪೊಲೀಸರು ಮನೆಗೆ ಭೇಟಿ ಕೊಟ್ಟಾಗ ಕೋಣೆಯಲ್ಲಿ ಅನುರಾಧಾ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಫ್ಯಾನ್‌ನಲ್ಲಿ ನೇತಾಡುತ್ತಿತ್ತು.

ತೆಲುಗಿನ ಸಿನಿಮಾಗಳಲ್ಲಿ ಜೂನಿಯರ್ ಆರ್ಟಿಸ್ಟ್‌ ಆಗಿ ಅನುರಾಧಾ ಕೆಲಸ ಮಾಡುತ್ತಿದ್ದರು, ಅನುರಾಧಾ ಕಳೆದ ಆರು ವರ್ಷಗಳಿಂದ ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದರು, ಆದರೆ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿದ ಕಾರಣ ಬೇರಾಗಿದ್ದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್