ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಬಾಹುಬಲಿ ನಿರ್ದೇಶಕ ರಾಜಮೌಳಿ 'ಆರ್ ಆರ್ ಆರ್' ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

20ನೇ ಶತಮಾನದ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲುರಿ ಸೀತಾರಾಮ ರಾಜು ಮತ್ತು ಕುಮ್ರಂ ಭೀಮ್ ಅವರ ಪಾತ್ರಗಳಲ್ಲಿ ಕ್ರಮವಾಗಿ ರಾಮಚರಣ್ ಮತ್ತು ಜೂನಿಯರ್ ಎನ್ ಟಿ ಆರ್ ನಟಿಸಿದ್ದಾರೆ. 

ಹೈದರಾಬಾದ್: ಬಾಹುಬಲಿ ಖ್ಯಾತಿಯ ನಿರ್ದೇಶಕ ರಾಜಮೌಳಿ ನಿರ್ದೇಶನದ 'ಆರ್ ಆರ್ ಆರ್' (ರೈಸ್ ರೋರ್ ರಿವೋಲ್ಟ್) ಸಿನಿಮಾ ಬಿಡುಗಡೆ ದಿನಾಂಕ ಹೊರಬಿದ್ದಿದೆ. 2022 ಜನವರಿ 7 ರಂದು ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣಲಿದೆ ಎಂದು ಚಿತ್ರತಂಡ ಘೋಷಿಸಿದೆ. 

ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿ ಆರ್ ನಾಯಕರಾಗಿ ಕಾಣಿಸಿಕೊಳ್ಳುತ್ತಿರುವ ಸಿನಿಮಾ, ಪ್ರೇಕ್ಷಕರಲ್ಲಿ ತುಂಬಾ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ೨೦ನೇ ಶತಮಾನದ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲುರಿ ಸೀತಾರಾಮ ರಾಜು ಮತ್ತು ಕುಮ್ರಂ ಭೀಮ್ ಅವರ ಪಾತ್ರಗಳಲ್ಲಿ ಕ್ರಮವಾಗಿ ರಾಮಚರಣ್ ಮತ್ತು ಜೂನಿಯರ್ ಎನ್ ಟಿ ಆರ್ ನಟಿಸಿದ್ದಾರೆ. ಬಾಹುಬಲಿ ಕಥೆ ಬರೆದಿದ್ದ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಅವರೇ ಈ ಚಿತ್ರಕ್ಕೂ ಕಥೆ ರಚಿಸಿದ್ದಾರೆ.

ರಾಜಮೌಳಿ ಸಿನಿಮಾದಲ್ಲಿ ಬಾಲಿವುಡ್ ನಟರಾದ ಅಜಯ್ ದೇವಗನ್ ಮತ್ತು ಆಲಿಯಾ ಭಟ್ ನಟಿಸಿದ್ದಾರೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ 'ಆರ್ ಆರ್ ಆರ್' ಸಿನಿಮಾ ಬಿಡುಗಡೆ ಮಾಡುವ ಯೋಚನೆಯನ್ನು ಸಿನಿಮಾ ತಂಡ ಹೊಂದಿತ್ತು. ಅದರೆ ಕೊರೊನಾ ಹಿನ್ನೆಲೆಯಲ್ಲಿ ಬಿಡುಗಡೆ ಮುಂದೂಡಲ್ಪಟ್ಟಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರಿನ ಐದು ಹೊಸ ಪಾಲಿಕೆಗಳಿಗೆ 368 ವಾರ್ಡ್ ರಚನೆ: ಪಶ್ಚಿಮ ಪಾಲಿಕೆಗೆ ಗರಿಷ್ಠ 111 ವಾರ್ಡ್

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ

ಟ್ರೋಫಿ 'ಕಳ್ಳ' ಮೊಹ್ಸಿನ್ ನಖ್ವಿಗೆ ಸಂಕಷ್ಟ? ಏಷ್ಯಾ ಕಪ್ ಟ್ರೋಫಿ ಮರಳಿ ಪಡೆಯಲು ಅಖಾಡಕ್ಕೀಳಿದ BCCI; ಷರತ್ತು ಹಾಕಿದ ನಖ್ವಿ!

ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರ!

ರಾಜ್ಯ ಸರ್ಕಾರದಿಂದ "ಮಹಿಷಾಸುರ ಟ್ಯಾಕ್ಸ್" : ಬೆಂಗಳೂರು-ಮೈಸೂರು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಬಿಜೆಪಿ ಕಿಡಿ!

SCROLL FOR NEXT