"ತಿರುಗ್ಸೋ ಮೀಸೆ" ಈ ವಾರ ತೆರೆಗೆ
ಶ್ರೀ ಶ್ರೀನಿವಾಸ ಮೂವೀಸ್ ಲಾಂಛನದಲ್ಲಿ ಶ್ರೀನಿವಾಸ್ ಹಾಗೂ ರಿಜ್ವಾನ್ ನಿರ್ಮಿಸಿರುವ "ತಿರುಗ್ಸೋ ಮೀಸೆ" ಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.
ಬೆಂಗಳೂರು: ಶ್ರೀ ಶ್ರೀನಿವಾಸ ಮೂವೀಸ್ ಲಾಂಛನದಲ್ಲಿ ಶ್ರೀನಿವಾಸ್ ಹಾಗೂ ರಿಜ್ವಾನ್ ನಿರ್ಮಿಸಿರುವ "ತಿರುಗ್ಸೋ ಮೀಸೆ" ಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.
ಕೃಷ್ಣ ವಿಜಯ್ ಎಲ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಸುರೇಶ್ ಬೊಬ್ಬಿಲಿ ಸಂಗೀತ ನೀಡಿದ್ದು, ಐದು ಹಾಡುಗಳಿವೆ. ವಿ.ಮನೋಹರ್, ರಾಘವೇಂದ್ರ ಕಾಮತ್, ಆರ್ ಚಂದ್ರಶೇಖರ್ ಹಾಡುಗಳನ್ನು ಬರೆದಿದ್ದಾರೆ.
ಅನುರಾಧಾ ಭಟ್, ಅನಿರುದ್ದ್, ವ್ಯಾಸರಾಜ್, ಚೇತನ್ ನಾಯಕ್, ಮೇಘನಾ ಕುಲಕರ್ಣಿ ಜೋಷಿ ಹಾಗೂ ಮಾಸ್ಟರ್ ಕುಶಾಲ್ ಸೇನಾಪತಿ ಮುಂತಾದವರ ಕಂಠಸಿರಿಯಲ್ಲಿ ಈ ಹಾಡುಗಳು ಮೂಡಿಬಂದಿದೆ. ಸಿದ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನವಿದೆ.
ಶ್ರೀ ವಿಷ್ಣು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ನಿಕ್ಕಿ ತಂಬೋಲಿ. ರೋಹಿಣಿ, ಶ್ರೀಕಾಂತ್ ಅಯ್ಯಂಗಾರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.