ಶಂಕರ್ ರಾವ್ 
ಸಿನಿಮಾ ಸುದ್ದಿ

‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್​ ರಾವ್​ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ. 

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ. 

ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ತುಮಕೂರು ಮೂಲದ ಶಂಕರ್ ರಾವ್ ಅವರು ವೈವಿದ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಪಾರ ಅನುಭವ ಉಳ್ಳವರು. ಅದರಲ್ಲೂ ಹಾಸ್ಯ ಪಾತ್ರಗಳಲ್ಲಿ ಮಿಂಚಿ ಕನ್ನಡಿಗರನ್ನು ರಂಜಿಸಿದವರು. 

ಶಾಲಾ ದಿನಗಳಿಂದಲೇ ಅವರು ನಟನೆಯಲ್ಲಿ ಅಭಿರುಚಿ ಹೊಂದಿದ್ದರು. 1956ರಲ್ಲಿ ಬೆಂಗಳೂರಿಗೆ ಬಂದರು. ‘ನಟರಂಗ’ ತಂಡದ ಜೊತೆ ಶಂಕರ್​ ರಾವ್​  ಗುರುತಿಸಿಕೊಂಡಿದ್ದರು. ಹವ್ಯಾಸಿ ರಂಗಭೂಮಿ ಕಲಾವಿದನಾಗಿದ್ದ ಅವರು ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT