ಸಿನಿಮಾ ಸುದ್ದಿ

ಹಿರಿಯ ನಟರ ದಂಡೇ ಮೇಳೈಸಿರುವ ರತ್ನನ್ ಪ್ರಪಂಚ: ಅಮೆಜಾನ್ ಪ್ರೈಮ್ ನಲ್ಲಿ ಅಕ್ಟೋಬರ್ 22ರಂದು ತೆರೆಗೆ

ಕನ್ನಡದ ಖ್ಯಾತ ಹಿರಿಯ ನಟಿ ಉಮಾಶ್ರೀ ಹಲವು ವರ್ಷಗಳ ನಂತರ ಈ ಸಿನಿಮಾ ಮೂಲಕ ಮತ್ತೆ ಬಣ್ಣ ಹಚ್ಚಿರುವುದು ವಿಶೇಷ. ಅವರು ನಾಯಕ ನಟ ಧನಂಜಯ ಅವರ ತಾಯಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. 

ಅಕ್ಟೋಬರ್ 22ರಂದು ಅಮೆಜಾನ್ ಪ್ರೈಮ್ ನಲ್ಲಿ ನೇರವಾಗಿ ಬಿಡುಗಡೆಯಾಗುತ್ತಿರುವ ರೋಹಿತ್ ಪದಕಿ ನಿರ್ದೇಶನದ 'ರತ್ನನ್ ಪ್ರಪಂಚ' ಸಿನಿಮಾದಲ್ಲಿ ಹಿರಿಯ ನಟರ ಸಾಲೇ ಇದೆ. ಅವರೆಲ್ಲರೂ ಬಹುದಿನಗಳ ನಂತರ ಇಂಟರೆಸ್ಟಿಂಗ್ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. 

ಕನ್ನಡದ ಖ್ಯಾತ ಹಿರಿಯ ನಟಿ ಉಮಾಶ್ರೀ 6 ವರ್ಷಗಳ ನಂತರ ಈ ಸಿನಿಮಾ ಮೂಲಕ ಮತ್ತೆ ಬಣ್ಣ ಹಚ್ಚಿರುವುದು ವಿಶೇಷ. ಅವರು ನಾಯಕ ನಟ ಧನಂಜಯ ಅವರ ತಾಯಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. 

ಶ್ರುತಿ, ಅನು ಪ್ರಭಾಕರ್, ರವಿಶಂಕರ್, ಅಚ್ಯುತ್ ಕುಮಾರ್ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅನು ಪ್ರಭಾಕರ್ ಅವರು ರೋಹಿತ್ ಪದಕಿ ಅವರ ಈ ಹಿಂದಿನ ದಯವಿಟ್ಟು ಗಮನಿಸಿ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಕೈಗೂಡಿರಲಿಲ್ಲ. ಆ ಸಿನಿಮಾದಲ್ಲಿ ಅನು ಪತಿ ರಘು ಮುಖರ್ಜಿ ನಟಿಸಿದ್ದರು. ಆ ಸಿನಿಮಾ ತಮಗೆ ತುಂಬಾ ಇಷ್ತವಾಗಿತ್ತು. ಆ ಸಿನಿಮಾದ ಭಾಗವಾಗಲು ಆಗಲಿಲ್ಲವಲ್ಲ ಎನ್ನುವ ಬೇಸರ ಈ ಸಿನಿಮಾದಿಂದ ದೂರವಾಗಿದೆ ಎಂದು ಅನು ಪ್ರಭಾಕರ್ ಸಮ್ತಸ ಹಂಚಿಕೊಂಡಿದ್ದಾರೆ. 

ರತ್ನನ್ ಪ್ರಪಂಚ ಸಿನಿಮಾವನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಈ ಸಿನಿಮಾಗೆ ಹಣ ಹೂಡಿದ್ದಾರೆ. ಧನಂಜಯ, ರೆಬಾ ಮೋನಿಕಾ ಜಾನ್ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ವೈನಿಧಿ ಜಗದೀಶ್ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT