ಸಿನಿಮಾ ಸುದ್ದಿ

ತಿಮ್ಮಯ್ಯ & ತಿಮ್ಮಯ್ಯ ಸಿನಿಮಾದಲ್ಲಿ ಒಂದಾದ ಪಂಚರಂಗಿ ಜೋಡಿ

ತಿಮ್ಮಯ್ಯ ಅಂಡ್ ತಿಮ್ಮಯ್ಯ ಸಿನಿಮಾದಲ್ಲಿ ಅನಂತ್ ನಾಗ್ ಅವರು ದಿಗಂತ್ ಅವರ ತಾತನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಡಿಕೇರಿಯಲ್ಲಿ ಬೇರು ಬಿಟ್ಟ ಕುಟುಂಬದ ಕಥೆಯನ್ನು ಚಿತ್ರ ಹೊಂದಿದೆ. 

ಬೆಂಗಳೂರು: ಹಲವು ಸಿನಿಮಾಗಳ ಚಿತ್ರೀಕರಣ ಮುಗಿಸಿರುವ ನಟ ದಿಗಂತ್ ಅಕ್ಟೋಬರ್ 21ರಿಂದ ತಿಮ್ಮಯ್ಯ & ತಿಮ್ಮಯ್ಯ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಸಿನಿಮಾದಲ್ಲಿ ಅವರು ಹಿರಿಯ ನಟ ಚಿರ ಯೌವ್ವನಿಗ ಅನಂತ್ ನಾಗ್ ಅವರ ಜೊತೆ ಪರದೆ ಹಂಚಿಕೊಳ್ಳುತ್ತಿದ್ದಾರೆ.

ಕಮರ್ಷಿಯಲ್ ಜಾಹಿರಾತು ನಿರ್ದೇಶಕರಾಗಿ ಕೆಲಸ ಮಾಡಿರುವ ಸಂಜಯ್ ಶರ್ಮಾ ಅವರು ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಅವರ ಮೊದಲ್ನೇ ಸಿನಿಮಾ. ತಿಮ್ಮಯ್ಯ ಆ್ಯಂಡ್‌ ತಿಮ್ಮಯ್ಯ ಸಿನಿಮಾದಲ್ಲಿ ಅನಂತ್ ನಾಗ್ ಅವರು ದಿಗಂತ್ ಅವರ ತಾತನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಡಿಕೇರಿಯಲ್ಲಿ ಬೇರು ಬಿಟ್ಟ ಕುಟುಂಬದ ಕಥೆಯನ್ನು ಚಿತ್ರ ಹೊಂದಿದೆ. 

ದಿಗಂತ್ ಅವರಿಗೆ ಜೋಡಿಯಾಗಿ ಐಂದ್ರಿತಾ ರೇ ಅವರು ಸಿನಿಮಾದಲ್ಲಿ ನಟಿಸುತ್ತಿರುವುದು ವಿಶೇಷ. ನಿಜಬದುಕಿನಲ್ಲೂ ಜೋಡಿಯಾಗಿರುವ ದಿಗಂತ್ ಮತ್ತು ಐಂದ್ರಿತಾ ರೇ, ಇದಕ್ಕೂ ಮುಂಚೆ ಮನಸಾರೆ, ಪಾರಿಜಾತ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದರು. ಸಿನಿಮಾದಲ್ಲಿ ಶುಭ್ರಾ ಐಯ್ಯಪ್ಪ ಎರಡನೇ ನಾಯಕಿಯಾಗಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!