ಚಿತ್ರತಂಡದೊಂದಿಗೆ ಮೇಘನಾ ರಾಜ್ 
ಸಿನಿಮಾ ಸುದ್ದಿ

ಥ್ರಿಲ್ಲರ್ ಸಿನಿಮಾ ಮೂಲಕ ಮೇಘನಾ ರಾಜ್ ಕಮ್ ಬ್ಯಾಕ್!

ಥ್ರಿಲ್ಲರ್ ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಮೇಘನಾರಾಜ್ ಅಭಿನಯಿಸಲಿದ್ದಾರೆ. 

ಥ್ರಿಲ್ಲರ್ ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಮೇಘನಾರಾಜ್ ಅಭಿನಯಿಸಲಿದ್ದಾರೆ. 

ಹ್ಯಾಪಿ ನ್ಯೂ ಇಯರ್ ಮತ್ತು ಫ್ರೆಂಚ್ ಬಿರಿಯಾನಿ ಚಿತ್ರಗಳ ಮೂಲಕ ನಿರ್ದೇಶಕರಾಗಿ ಛಾಪು ಮೂಡಿಸಿರುವ ಪನ್ನಗಾಭರಣ, ಈ ಸಿನಿಮಾ ಮೂಲಕ ನಿರ್ಮಾಪಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಚಿರಂಜೀವಿ ಸರ್ಜಾ ಅವರ ಜನ್ಮ ದಿನಾಚರಣೆಯಂದು (ಅಕ್ಟೋಬರ್ 17) ಚಿತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಕ್ರೈಮ್ ಥ್ರಿಲ್ಲರ್ ನಲ್ಲಿ ನಾಲ್ಕು ಪ್ರಮುಖ ಪಾತ್ರಗಳಿದ್ದು ಮೇಘನಾ  ಪ್ರಾಜೆಕ್ಟ್ ನಲ್ಲಿ ಮೊದಲಿಗರಾಗಿದ್ದಾರೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಸದ್ಯ ನಿರ್ದೇಶಕರು ಉಳಿದ ಕಲಾವಿದರನ್ನು  ಅಂತಿಮಗೊಳಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಪ್ಲಾನ್ ಮಾಡಿದೆ.  ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಲಿದ್ದಾರೆ.

2018 ರಲ್ಲಿ ಇರುವುದೆಲ್ಲವ ಬಿಟ್ಟು ಸಿನಿಮಾದಲ್ಲಿ ಮೇಘನಾ ರಾಜ್ ಕಾಣಿಸಿಕೊಂಡಿದ್ದರು, ಇದರ ಜೊತೆಗೆ ಸೆಲ್ಫಿ ಮಮ್ಮ, ಗೂಗಲ್ ಡ್ಯಾಡಿ ಹಾಗೂ ಬುದ್ಧಿವಂತ 2 ಸಿನಿಮಾಗಳಲ್ಲಿಯೂ ಮೇಘನಾ ಕಾಣಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ