ಡಿಸೆಂಬರ್ 2 ನೇ ವಾರದಿಂದ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ ಆರಂಭ
ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ ‘ಟೆಲಿವಿಷನ್ ಕ್ರಿಕೆಟ್ ಲೀಗ್’ ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ.
ಬೆಂಗಳೂರು: ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ ‘ಟೆಲಿವಿಷನ್ ಕ್ರಿಕೆಟ್ ಲೀಗ್’ ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ.
ಟಿಸಿಎಲ್ ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೇಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೈಕರ್ ಎಂಬ 6 ತಂಡಗಳಿರಲಿದ್ದು, ಕಿರುತರೆ ನಟ ನಟಿಯರು ಭಾಗವಹಿಸಲಿದ್ದಾರೆ.
ದೀಪಕ್ ಹಾಗೂ ಮಂಜೇಶ್ ಸಾರಥ್ಯದಲ್ಲಿ ನಡೆಯುತ್ತಿರುವ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬರೋಬ್ಬರಿ 102 ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ. ಈಗಾಗಲೇ ಎರಡು ಸೀಸನ್ಸ್ ಯಶಸ್ವಿಯಾಗಿ ಪೂರೈಸಿರುವ ಟಿಸಿಎಲ್, ಮೂರನೇ ಸೀಸನ್ ಪಂದ್ಯಾವಳಿಗೆ ಸಜ್ಜಾಗಿದೆ.
ಈ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಸ್ಟರ್ ಆನಂದ್, ಬಿಗ್ ಬಾಸ್ ಮಂಜು ಪಾವಗಡ, ಸಂಸ್ಥಾಪಕ ದೀಪಕ್, ಸಹ ಸಂಸ್ಥಾಪಕರಾದ ಮಂಜೇಶ್ ಮತ್ತು ವೈ ವಿ ಕಾರ್ತಿಕ್ ಸೇರಿದಂತೆ ಹಲವು ಕಿರುತೆರೆ ಕಲಾವಿದರು ಭಾಗಿಯಾಗಿದ್ದರು. ಕಿರುತೆರೆ ಕಲಾವಿದರೆಲ್ಲರೂ ಸೇರುವುದೇ ಒಂದು ಹಬ್ಬ. ಇಂತಹ ಹಬ್ಬಕ್ಕೆ ಟೆಲಿವಿಷನ್ ಕ್ರಿಕೆಟ್ ಲೀಗ್ ಸಜ್ಜಾಗಿದೆ. ಬರೋ ಡಿಸೆಂಬರ್ ಎರಡನೇ ವಾರದಿಂದ ಕಿರುತೆರೆ ಕಲಾವಿದರ ಕ್ರಿಕೆಟ್ ಹಂಗಾಮ ಶುರುವಾಗಲಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.