ಪುನೀತ್ ರಾಜ್‍ಕುಮಾರ್ 
ಸಿನಿಮಾ ಸುದ್ದಿ

ಮಾ. ಲೋಹಿತ್​ ಕನ್ನಡಿಗರ 'ಅಪ್ಪು' ಆಗಿ ಬೆಳೆದುಬಂದ ಹಾದಿ...

ಡಾ. ರಾಜ್​ ಕುಮಾರ್​ ಹಾಕಿಕೊಟ್ಟ ಮಾರ್ಗವನ್ನು ಚಾಚೂ ತಪ್ಪದೇ ಪಾಲಿಸಿಕೊಂಡುಬಂದವರು ಪವರ್​ ಸ್ಟಾರ್​ ಪುನೀತ್ ರಾಜ್‍ಕುಮಾರ್ ಇಂದು ಯಾರೂ ನಿರೀಕ್ಷಿಸದ ಅಘಾತವನ್ನು ಉಂಟು ಮಾಡಿ ಇಹಲೋಕ ತ್ಯಜಿಸಿದ್ದಾರೆ.

ಬೆಂಗಳೂರು: ಡಾ. ರಾಜ್​ ಕುಮಾರ್​ ಹಾಕಿಕೊಟ್ಟ ಮಾರ್ಗವನ್ನು ಚಾಚೂ ತಪ್ಪದೇ ಪಾಲಿಸಿಕೊಂಡುಬಂದವರು ಪವರ್​ ಸ್ಟಾರ್​ ಪುನೀತ್ ರಾಜ್‍ಕುಮಾರ್ ಇಂದು ಯಾರೂ ನಿರೀಕ್ಷಿಸದ ಅಘಾತವನ್ನು ಉಂಟು ಮಾಡಿ ಇಹಲೋಕ ತ್ಯಜಿಸಿದ್ದಾರೆ. 17 ಮಾರ್ಚ್, 1975 ರಿಂದ ಇಂದಿನವರೆಗೂ ನಟ, ಹಿನ್ನೆಲೆ ಗಾಯಕ ಮತ್ತು ದೂರದರ್ಶನದ ನಿರೂಪಕರಾಗಿ ತಮ್ಮದೇ ಚಾಪು ಮೂಡಿಸಿದ್ದರು.

ಪುನೀತ್ ಈವರೆಗೆ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಬಾಲ್ಯದಲ್ಲಿ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ ನಟನಾಗಿ ವಸಂತ ಗೀತ(1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು(1983) ಮತ್ತು ಬೆಟ್ಟದ ಹೂವು(1985) ಚಿತ್ರಗಳಲ್ಲಿ ನಟಿಸಿ ತಮ್ಮ ನಟನೆಗೆ ನಾಡಿನ ಅಭಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆದಿದ್ದರು.

ಪುನೀತ್​ ಅವರ ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿತ್ತು. ಪುನೀತ್ ಅವರು ಮೊದಲ ಬಾರಿಗೆ 2002 ರಲ್ಲಿ ಅಪ್ಪು ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕ ನಟನಾಗಿ ಪಾದಾರ್ಪಣೆ ಮಾಡಿದ್ದರು. ನಂತರ ಕರ್ನಾಟಕದ ತುಂಬೆಲ್ಲಾ ಅಪ್ಪು ಎಂದು ಪರಿಚಿತರಾದರು. ಅವರು ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಹಲವಾರು ಯಶಸ್ವಿ ಚಲನಚಿತ್ರಗಳು ನೀಡಿದ್ದಾರೆ.

ಪ್ರಮುಖ ವಿಷಯ ಎಂದರೆ ಕೇವಲ ತಾನು ನಟನೆಗಷ್ಟೇ ಸೀಮಿತವಲ್ಲ ಎಂಬುದನ್ನು ತೋರಿಸಲು ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಕೂಡ ಮಾಡಿದ್ದಾರೆ.

ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಅವರ ಕಿರಿಯ ಮಗನಾಗಿ ಜನಿಸಿದ ಇವರಿಗೆ ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. 
ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತ್ತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್​ಗೆ ಕರೆದುಕೊಂಡು ಹೋಗುತ್ತಿದ್ದರು.

ಪುನೀತ್ ರಾಜ್ ಕುಮಾರ್ ಅವರು ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ಅವರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ ದ್ರಿತಿ ಮತ್ತು ವಂದಿತಾ. ಅಪ್ಪು ಅವರ ಮೊದಲ ಹೆಸರು ಮಾ.ಲೋಹಿತ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT