ಸಿನಿಮಾ ಸುದ್ದಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್ ಸ್ಟಾರ್ ರಜನಿಕಾಂತ್, ಮನೆಗೆ ಆಗಮನ

Srinivasamurthy VN

ಚೆನ್ನೈ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇದೇ ಅಕ್ಟೋಬರ್‌ 28ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಎದೆಯ ಭಾಗದಲ್ಲಿ ನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು, ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಇತ್ತೀಚೆಗಷ್ಟೇ ಅವರಿಗೆ ಮಿದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಶಸ್ತ್ರಚಿಕಿತ್ಸೆ (carotid artery revascularisation) ನಡೆಸಲಾಗಿತ್ತು. ಬಳಿಕ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಆರೋಗ್ಯ ವಿಚಾರಿಸಿದ್ದ ತಮಿಳುನಾಡು ಸಿಎಂ
ಇನ್ನು ಭಾನುವಾರ ಮುಖ್ಯಮಂತ್ರಿ ಸ್ಟಾಲಿನ್‌ ಅವರು ರಜನಿಕಾಂತ್‌ ಅವರನ್ನು ಭೇಟಿಯಾಗಿ ಶೀಘ್ರ ಗುಣಮುಖರಾಗಲು ಹಾರೈಸಿದ್ದರು. 

'ತಲೆ ಸುತ್ತಿದಂತಾದ ಅನುಭವವಾದ ಕಾರಣದಿಂದ ರಜನಿಕಾಂತ್‌ ಅವರು ಆಸ್ಪತ್ರೆಗೆ ದಾಖಲಾದರು. ತಜ್ಞ ವೈದ್ಯರ ತಂಡವು ಅವರ ಆರೋಗ್ಯ ತಪಾಸಣೆ ನಡೆಸಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಶಸ್ತ್ರ ಚಿಕಿತ್ಸೆಯು ಯಶಸ್ವಿಯಾಗಿದೆ, ಅವರು ಚೇತರಿಸಿಕೊಳ್ಳುತ್ತಿದ್ದಾರೆ' ಎಂದು ಶುಕ್ರವಾರ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿತ್ತು.

ಸೋಮವಾರ ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್‌ ಅವರಿಗೆ 51ನೇ 'ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ' ಪ್ರದಾನ ಮಾಡಲಾಯಿತು. ರಜನಿಕಾಂತ್‌ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರನ್ನು ಭೇಟಿಯಾಗಿದ್ದರು. 
 

SCROLL FOR NEXT