ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ 'ಚಿನ್ನದ ಹುಡುಗ' ನೀರಜ್ ಚೋಪ್ರಾ ಶುಭಾಶಯ

Sumana Upadhyaya

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಈಟಿ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇಡೀ ಭಾರತದಾದ್ಯಂತ ಜನಪ್ರಿಯರಾಗಿದ್ದಾರೆ ನೀರಜ್ ಚೋಪ್ರಾ. ಸ್ವತಂತ್ರ ಭಾರತದ ಒಲಿಂಪಿಕ್ ಇತಿಹಾಸದಲ್ಲಿ ವೈಯಕ್ತಿಕ ಟ್ರ್ಯಾಕ್ ಅಂಡ್ ಫೀಲ್ಡ್ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಾರತದ ಮೊದಲ ಅಥ್ಲಿಟ್ ಎಂಬ ಕೀರ್ತಿಗೂ ನೀರಜ್ ಚೋಪ್ರಾ ಭಾಜನರಾಗಿದ್ದಾರೆ.

ಇದೀಗ ಈ 'ಚಿನ್ನದ ಹುಡುಗ' ನೀರಜ್ ಚೋಪ್ರಾ ಕನ್ನಡ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ಗೆ ಹುಟ್ಟುಹಬ್ಬ ಶುಭಾಶಯಗಳನ್ನು ತಿಳಿಸಿದ್ದಾರೆ. ನಾಳೆ ಕಿಚ್ಚನ ಜನ್ಮದಿನ. ಆ ಪ್ರಯುಕ್ತ ವಿಡಿಯೋ ಮೂಲಕ ಕಿಚ್ಚ ಸುದೀಪ್‌ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ ನೀರಜ್ ಚೋಪ್ರಾ. ''ವಿಶ್ ಯೂ ಹ್ಯಾಪಿ ಬರ್ತಡೇ ಸುದೀಪ್‌ಜಿ. ನಿಮ್ಮ ಸಿನಿಮಾಗೆ ಆಲ್ ದಿ ಬೆಸ್ಟ್. ದೇವರು ನಿಮಗೆ ಒಳ್ಳೆಯದು ಮಾಡಲಿ'' ಎಂದು ವಿಡಿಯೋದಲ್ಲಿ ನೀರಜ್ ಚೋಪ್ರಾ ಹೇಳಿದ್ದಾರೆ.

SCROLL FOR NEXT