ವಿಕ್ರಾಂತ್ ರೋಣ ಸ್ಚಿಲ್ 
ಸಿನಿಮಾ ಸುದ್ದಿ

‘ವಿಕ್ರಾಂತ್ ರೋಣ’ ಚಿತ್ರದ ‘ಡೆಡ್ ಮ್ಯಾನ್ ಆಂಥೆಮ್’ ರಿಲೀಸ್: ಕಿಚ್ಚನ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ!

ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ 49ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರತಂಡವು ‘ಡೆಡ್ ಮ್ಯಾನ್ ಆಂಥೆಮ್’ ​ಬಿಡುಗಡೆ ಮಾಡಿದೆ.

ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ 49ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರತಂಡವು ‘ಡೆಡ್ ಮ್ಯಾನ್ ಆಂಥೆಮ್’ ​ಬಿಡುಗಡೆ ಮಾಡಿದೆ. ಇದರಲ್ಲಿನ ಕಿಚ್ಚನ ನೂತನ ಸ್ಟೈಲಿಶ್ ಖದರ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್‍ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ. ಬಹು ಕೋಟಿ ವೆಚ್ಚದಲ್ಲಿ ತಯಾರಾಗಿರುವ ಈ ಸಿನಿಮಾದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಇದ್ದು, ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ಚಿತ್ರತಂಡ ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ವಿಕ್ರಾಂತ್ ರೋಣ ಸಿನಿಮಾದ ಡೆಡ್ ಮ್ಯಾನ್ ಆಂಥೆಮ್ ಎಂಬ ಟೀಸರ್‌ನನ್ನು ಬಿಡುಗಡೆಗೊಳಿಸಿ ಅಭಿಮಾನಿಗಳ ಕೂತುಹಲವನ್ನು ಮತ್ತಷ್ಟು ಕೆರಳಿಸಿದೆ.

ಈ ಟೀಸರ್‌ನನ್ನು ನಿರ್ದೇಶಕ ನಿರೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಟೀಸರ್‍ನಲ್ಲಿ ಸುದೀಪ್ ಬ್ಲಾಕ್ ಕಲರ್ ಲಾಂಗ್ ಜಾಕೆಟ್ ಹಾಗೂ ಕ್ಯಾಪ್ ತೊಟ್ಟು ಮಳೆಯಲ್ಲಿ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನಲ್ಲಿ ಕಿಚ್ಚ ಆ್ಯಕ್ಷನ್ ದೃಶ್ಯವಳಿಯಲ್ಲಿ ಕಾಣಿಸಿಕೊಂಡಿದ್ದು, ಟೀಸರ್ ನೋಡಲು ಸಖತ್ ಥ್ರಿಲಿಂಗ್ ಆಗಿದೆ.

ವಿಕ್ರಾಂತ್ ರೋಣ 3-ಡಿ ಬಹುಭಾಷಾ ಆಕ್ಷನ್-ಸಾಹಸವಾಗಿದ್ದು, ಇದು 14 ಭಾಷೆಗಳಲ್ಲಿ ಮತ್ತು ಸುಮಾರು 55 ದೇಶಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಶಾಲಿನಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ತಯಾರಿಸಲಾಗಿದ್ದು, ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡಿದ್ದಾರೆ.

ವಿಕ್ರಾಂತ್ ರೋಣ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಕೂಡ ಕಾಣಿಸಿಕೊಂಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಚಿತ್ರತಂಡವು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT