ಪೆಡ್ರೋ 
ಸಿನಿಮಾ ಸುದ್ದಿ

ದಕ್ಷಿಣ ಕೊರಿಯಾದ ಬುಸಾನ್​ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ 'ಪೆಡ್ರೋ' ಚಿತ್ರ ಆಯ್ಕೆ

ರಿಷಬ್​ ಶೆಟ್ಟಿ ನಿರ್ಮಾಣದ ಹಾಗೂ ನಟೇಶ್​ ಹೆಗಡೆ ನಿರ್ದೇಶನದ ‘ಪೆಡ್ರೋ’ ಸಿನಿಮಾ ದಕ್ಷಿಣ ಕೊರಿಯಾದ ಬುಸಾನ್​ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು, ಬುಸಾನ್​ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡದ ಸಿನಿಮಾ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. 

ಬೆಂಗಳೂರು: ರಿಷಬ್​ ಶೆಟ್ಟಿ ನಿರ್ಮಾಣದ ಹಾಗೂ ನಟೇಶ್​ ಹೆಗಡೆ ನಿರ್ದೇಶನದ ‘ಪೆಡ್ರೋ’ ಸಿನಿಮಾ ದಕ್ಷಿಣ ಕೊರಿಯಾದ ಬುಸಾನ್​ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು, ಬುಸಾನ್​ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡದ ಸಿನಿಮಾ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. 

ಈ ಕುರಿತು ಸಂತಸ ಹಂಚಿಕೊಂಡಿರುವ ರಿಷಬ್ ಶೆಟ್ಟಿಯವರು, ಏಷ್ಯಾದ ಅತಿದೊಡ್ಡ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ ಮೊದಲ ಕನ್ನಡ ಚಿತ್ರ ಇದಾಗಲಿದ್ದು, ಇದು ನಮ್ಮ ತಂಡಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದ್ದಾರೆ. 

ಪೆಡ್ರೋ ಚಿತ್ರದ ಚಿತ್ರೀಕರಣ 2019ರಲ್ಲಿ ನಡೆದಿತ್ತು. ಇಡೀ ಚಿತ್ರವನ್ನು ಶಿರಸಿಯಲ್ಲಿ ನಡೆಸಲಾಗಿತ್ತು ಎಂದು ನಟೇಶ್ ಅವರು ಹೇಳಿದ್ದಾರೆ. 

‘ಪೆಡ್ರೋ’ ಸಿನಿಮಾ ಈ ಮೊದಲು ಎನ್‌ಎಫ್‌ಡಿಸಿ ಫಿಲ್ಮ್ ಬಜಾರ್‌ನ ವರ್ಕ್‌ ಇನ್ ಪ್ರೊಗ್ರೆಸ್ ಲ್ಯಾಬ್‌ಗೆ ಆಯ್ಕೆ ಆಗಿ ಪ್ರಶಸ್ತಿ ಸಹ ಪಡೆದುಕೊಂಡಿತ್ತು. ಬುಸಾನ್ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಪ್ರಶಸ್ತಿ ಪಡೆದುಕೊಂಡರೆ ಹೊಸ ದಾಖಲೆ ಸೃಷ್ಟಿ ಆಗಲಿದೆ.

ಕೋವಿಡ್ ನಿಂದಾಗಿ ಸಿನಿಮಾ ಸಿದ್ಧವಿದ್ದರೂ ಪ್ರೇಕ್ಷಕರ ಮುಂದೆ ತರಲು ಚಿತ್ರತಂಡಕ್ಕೆ ಸಾಧ್ಯವಾಗಿಲ್ಲ. ಚಿತ್ರವು ಈ ವರ್ಷದ ಗೋಸ್ ಟು ಕೇನ್ಸ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗೊಳ್ಳಬೇಕಿತ್ತು. ಆದರೆ, ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಈ ಬಾರಿಯ ಚಲನಚಿತ್ರೋತ್ಸವ ರದ್ದುಗೊಂಡಿದೆ. 

ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ, ಗೋಪಾಲ ಹೆಗಡೆ, ರಾಮಕೃಷ್ಣ ಭಟ್, ಮೇಧಿನಿ ಕೆಳಮನೆ, ನಾಗರಾಜ ಹೆಗಡೆ ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್