ಬಾಲು ನಾಗೇಂದ್ರ ಮತ್ತು ಶೃತಿ ಹರಿಹರನ್ 
ಸಿನಿಮಾ ಸುದ್ದಿ

'ಹೆಡ್ ಬುಷ್' ತಂಡಕ್ಕೆ ಬಾಲು ನಾಗೇಂದ್ರ -ಶೃತಿ ಹರಿಹರನ್ ಸೇರ್ಪಡೆ: ಸಿನಿಮಾ ಬಗ್ಗೆ ಹೆಚ್ಚಿದ ಎಕ್ಸ್ ಪೆಕ್ಟೇಷನ್!

ಕಪಟ ನಾಟಕ ಸೂತ್ರಧಾರಿ ಮತ್ತು ಹುಲಿರಾಯ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶಿಸಿದ ಬಾಲು ನಾಗೇಂದ್ರ , ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ತಂಡ ಪ್ರವೇಶಿಸಿದ್ದಾರೆ.

ಕಪಟ ನಾಟಕ ಸೂತ್ರಧಾರಿ ಮತ್ತು ಹುಲಿರಾಯ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶಿಸಿದ ಬಾಲು ನಾಗೇಂದ್ರ , ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ತಂಡ ಪ್ರವೇಶಿಸಿದ್ದಾರೆ. ಹೆಡ್ ಬುಷ್ ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

ಬೆಂಗಳೂರಿನ ಮೊದಲ ಅಂಡರ್‌ವರ್ಲ್ಡ್‌ ಡಾನ್ ಆಗಿದ್ದ ಎಂ.ಪಿ. ಜಯರಾಜ್ ಬಯೋಪಿಕ್ ಆಗಿರುವ ಈ ಸಿನಿಮಾದ ಮೇಲೆ ಈಗಾಗಲೇ ದೊಡ್ಡಮಟ್ಟದ ನಿರೀಕ್ಷೆ ಹುಟ್ಟುಕೊಂಡಿದೆ. ಇದಕ್ಕೆ ಸ್ಕ್ರಿಪ್ಟ್ ಬರೆಯುತ್ತಿರುವುದು ಅಗ್ನಿ ಶ್ರೀಧರ್ ಅನ್ನೋದು ವಿಶೇಷ. ಹೊಸ ಪ್ರತಿಭೆ ಶೂನ್ಯ ಇದರ ನಿರ್ದೇಶನ ಮಾಡುತ್ತಿದ್ದಾರೆ. ಜಯರಾಜ್ ಪಾತ್ರ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಮಾಡುತ್ತಿದ್ದಾರೆ ಡಾಲಿ ಧನಂಜಯ. 

'ಹೆಡ್‌ ಬುಷ್‌' ಸಿನಿಮಾವು ಪಾತ್ರವರ್ಗದಿಂದಲೇ ಸಾಕಷ್ಟು ಗಮನಸೆಳೆಯುತ್ತಿರುವುದು ವಿಶೇಷ. ಈಚೆಗಷ್ಟೇ ಲೂಸ್ ಮಾದ ಯೋಗಿ, ವಸಿಷ್ಠ ಸಿಂಹ ಅವರು ಈ ಸಿನಿಮಾಕ್ಕೆ ಎಂಟ್ರಿ ಕೊಟ್ಟಿದ್ದರು. 100 ಖ್ಯಾತಿಯ ಪಾಯಲ್‌ ರಜಪೂತ್ ಈ ಸಿನಿಮಾದ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

ಕನ್ನಡ ಸಿನಿಮಾದದಲ್ಲಿ ಕೆಲಕಾಲ ಬ್ರೇಕ್ ತೆಗೆದುಕೊಂಡಿದ್ದ ನಟಿ ಶೃತಿ ಹರಿಹರನ್ ಹೆಡ್ ಬುಷ್ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಇಷ್ಟು ದಿನ ವಯಕ್ತಿಕ ಜೀವನದ ಕಡೆ ಗಮನ ಹರಿಸಿದ್ದ ಶೃತಿ ಮತ್ತೆ ನಟನೆಯತ್ತ ಮುಖ ಮಾಡಿದ್ದಾರೆ.

ಇದೀಗ ಶ್ರುತಿ ಹರಿಹರನ್ ಎಂಟ್ರಿ ಕೊಟ್ಟಿದ್ದಾರೆ. ಅವರು ಚಿತ್ರದಲ್ಲಿ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಶ್ರುತಿ ಹರಿಹರನ್ ಅವರ ಸೇರ್ಪಡೆ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT