ಉಪೇಂದ್ರ 
ಸಿನಿಮಾ ಸುದ್ದಿ

ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಚಿತ್ರ ನಿರ್ದೇಶನ: ನಟ ಉಪೇಂದ್ರ

ಸಿನಿಮಾ ಚಿತ್ರೀಕರಣ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಕಾರ್ಯನಿರತರಾಗಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ಮತ್ತೆ ನಿರ್ದೇಶನಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

ಸಿನಿಮಾ ಚಿತ್ರೀಕರಣ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಕಾರ್ಯನಿರತರಾಗಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ಮತ್ತೆ ನಿರ್ದೇಶನಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. 

ಲಗಾಮ್ ಚಿತ್ರೀಕರಣದಲ್ಲಿ ಬಿಝಿಯಾಗಿದ್ದ ಉಪೇಂದ್ರ ಅವರು, ಇದೀಗ ಒಂದು ಸಣ್ಣ ವಿರಾಮ ತೆಗೆದುಕೊಂಡಿದ್ದು, ಚಿತ್ರ ನಿರ್ದೇಶನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ನಿರ್ದೇಶನಕ್ಕಿಳಿಯುವುದಾಗಿ ನಟ ಉಪೇಂದ್ರ ಅವರು ಹೇಳಿದ್ದಾರೆ. 

ಕಳೆದ ವರ್ಷವೇ ಸಿನಿಮಾವೊಂದನ್ನು ನಿರ್ದೇಶಿಸಲು ನಿರ್ಧರಿಸಿದ್ದೆ. ಈ ವರ್ಷ ಕೂಡ ಪ್ರಯತ್ನ ಮಾಡಿದ್ದೆ. ಆದರೆ, ಪ್ರಸ್ತುತದ ಕೋವಿಡ್ ಪರಿಸ್ಥಿತಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಚಿತ್ರರಂಗ ಮರಳಿ ಮೊದಲಿನಂತಾಗಲು ಕಾಯುತ್ತಿದ್ದೇನೆ. ಬಳಿಕ ಮುಂದಿನ ನಿರ್ದೇಶಿತ ಚಿತ್ರ ಕುರಿತು ಮಾಹಿತಿ ನೀಡುತ್ತೇನೆ. ನವೆಂಬರ್ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 

ಸೆಪ್ಟೆಂಬರ್ 18 ರಂದು ಉಪೇಂದ್ರ ಅವರ ಹುಟ್ಟುಹಬ್ಬವಿದ್ದು, ಈ ಸಂದರ್ಭದಲ್ಲಿ ಸೂಪರ್ ಸ್ಟಾರ್ ಉಪ್ಪಿ, ನಗರದಿಂದ ಹೊರ ಹೋಗಿ ಕುಟುಂಬದೊಂದಿಗೆ ಕಾಲ ಕಳೆಯಲು ನಿರ್ಧರಿಸಿದ್ದಾರೆ. ಪ್ರಸ್ತುತ ಉಪೇಂದ್ರ ಅವರು ಲಗಾಮ್ ಹಾಗೂ ಕಬ್ಜಾ ಚಿತ್ರಗಳ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. 

ಕಬ್ಜಾ ಚಿತ್ರದ ಚಿತ್ರೀಕರಣ ಇದೇ ಸೆಪ್ಟೆಂಬರ್ 20 ರಿಂದ ಮರಳಿ ಆರಂಭಗೊಳ್ಳಲಿದ್ದು, ಮುಂದಿನ ವಾರದಿಂದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದೇನೆಂದು ಉಪೇಂದ್ರ ಅವರು ಮಾಹಿತಿ ನೀಡಿದ್ದಾರೆ. 

ಎರಡೂ ಚಿತ್ರಗಳ ಚಿತ್ರೀಕರಣದಲ್ಲಿ ಮುಂದಿನ ಕೆಲವು ತಿಂಗಳು ಕಾಲ ತೊಡಗಿಕೊಳ್ಳುತ್ತಿದ್ದೇನೆ. ಇತರೆ ಚಿತ್ರಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಚಿತ್ರೀಕರಣ ಆರಂಭವಾಗುವ ಸಂದರ್ಭದಲ್ಲಿ ಈ ಕುರಿತು ಮಾಹಿತಿ ನೀಡುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT