ನಟ ವಿಜಯ್ 
ಸಿನಿಮಾ ಸುದ್ದಿ

ತಂದೆ-ತಾಯಿ ವಿರುದ್ಧವೇ ದೂರು ದಾಖಲಿಸಿದ ತಮಿಳು ನಟ ವಿಜಯ್!

ಖ್ಯಾತ ತಮಿಳು ನಟ ವಿಜಯ್ ಅವರು ತಮ್ಮ ಸ್ವಂತ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಚೆನ್ನೈ: ಖ್ಯಾತ ತಮಿಳು ನಟ ವಿಜಯ್ ಅವರು ತಮ್ಮ ಸ್ವಂತ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಈ ಹಿಂದೆ ಮತದಾನದ ವೇಳೆ ಸೈಕಲ್ ನಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದ ವಿಜಯ್ ಭಾರಿ ಸುದ್ದಿಗೆ ಗ್ರಾಸವಾಗಿದ್ದರು. ಕೇಂದ್ರ ಸರ್ಕಾರದ ಪೆಟ್ರೋಲ್ ದರ ಏರಿಕೆ ವಿರುದ್ಧ ವಿಜಯ್ ಈ ರೀತಿ ಮಾಡಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ದೇಶಾದ್ಯಂತ ವ್ಯಾಪಕ ಚರ್ಚೆಯಾಗಿತ್ತು. ಇದೀಗ ಇದರ ಬೆನ್ನಲ್ಲೇ ತಮ್ಮ ತಂದೆ ತಾಯಿ ವಿರುದ್ಧವೇ ಪೊಲೀಸ್ ದೂರು ದಾಖಲಿಸುವ ಮೂಲಕ ವಿಜಯ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. 

ದಳಪತಿ ವಿಜಯ್​ ತಮ್ಮ ತಂದೆ ತಾಯಿ ಸೇರಿ 11 ಜನರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ವಿಜಯ್​ ತಂದೆ ಖ್ಯಾತ ನಿರ್ದೇಶಕ ಎಸ್​.ಎ. ಚಂದ್ರಶೇಖರ್​. ಅವರು ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ‘ಆಲ್​ ಇಂಡಿಯಾ ದಳಪತಿ ವಿಜಯ್​ ಮಕ್ಕಳ್​ ಇಯಕ್ಕಮ್​’ ಪಕ್ಷ ಆರಂಭಿಸಿದ್ದರು. ಆದರೆ, ಅದು ವಿಜಯ್​ಗೆ ಇಷ್ಟವಿಲ್ಲ. ಈ ಕಾರಣಕ್ಕೆ ರಾಜಕೀಯದಲ್ಲಿ ತಮ್ಮ ಮತ್ತು ತಮ್ಮ ಫ್ಯಾನ್​ ಕ್ಲಬ್​ನ ಹೆಸರು ಬಳಕೆ ಮಾಡದಂತೆ ತಡೆಕೋರಬೇಕು ಎಂದು ವಿಜಯ್​ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.

ವಿಜಯ್​ ತಂದೆ ಖ್ಯಾತ ನಿರ್ದೇಶಕ ಎಸ್​.ಎ. ಚಂದ್ರಶೇಖರ್​. ಅವರು ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ‘ಆಲ್​ ಇಂಡಿಯಾ ದಳಪತಿ ವಿಜಯ್​ ಮಕ್ಕಳ್​ ಇಯಕ್ಕಮ್​’ ಪಕ್ಷ ಆರಂಭಿಸಿದ್ದರು. ಆದರೆ, ಅದು ವಿಜಯ್​ಗೆ ಇಷ್ಟವಿಲ್ಲ. ಈ ಕಾರಣಕ್ಕೆ ರಾಜಕೀಯದಲ್ಲಿ ತಮ್ಮ ಮತ್ತು ತಮ್ಮ ಫ್ಯಾನ್​ ಕ್ಲಬ್​ನ ಹೆಸರು ಬಳಕೆ ಮಾಡದಂತೆ ತಡೆಕೋರಬೇಕು ಎಂದು ವಿಜಯ್​ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.

‘ಆಲ್​ ಇಂಡಿಯಾ ದಳಪತಿ ವಿಜಯ್​ ಮಕ್ಕಳ್​ ಇಯಕ್ಕಮ್​’ ಪಕ್ಷಕ್ಕೆ ಚಂದ್ರಶೇಖರ್​ ಪ್ರಧಾನ ಕಾರ್ಯದರ್ಶಿ. ಅವರ ತಾಯಿ ಶೋಭಾ ಚಂದ್ರಶೇಖರ್​ ಖಜಾಂಚಿ. ಪದ್ಮನಾಭನ್​ ಪಕ್ಷದ ನಾಯಕ. ಕಳೆದ ವರ್ಷ ವಿಜಯ್​ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅವರು ಇದೇ ಪಕ್ಷ ಸೇರ್ಪಡೆ ಆಗುತ್ತಾರೆ ಎನ್ನುವ ಮಾತೂ ಹರಿದಾಡಿತ್ತು. ಈ ಮೂಲಕ 2021ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ತಂದೆಯ ರಾಜಕೀಯ ಪಕ್ಷಕ್ಕೆ ತಮ್ಮ ಯಾವುದೇ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ನನ್ನ ತಂದೆ ನೀಡಿರುವ ರಾಜಕೀಯ ಹೇಳಿಕೆಗಳೊಂದಿಗೆ ನನಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ ಎಂದು ವಿಜಯ್​ ಹೇಳಿದ್ದರು. ಪಕ್ಷಕ್ಕೆ ವಿಜಯ್​ ಹೆಸರಿದೆ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಆಗುವ ಸಾಧ್ಯತೆ ಇರುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ವಿಜಯ್​ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.

ಸಿನಿಮಾ ಬಗ್ಗೆ ಹೇಳೋದಾದರೆ ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಇತ್ತೀಚೆಗೆ ಫಸ್ಟ್​ ಲುಕ್​ ರಿಲೀಸ್​ ಆಗಿತ್ತು.  ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ವಿಜಯ್​ ನಡೆಯನ್ನು ಫ್ಯಾನ್ಸ್​ ಬೆಂಬಲಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!