ಸಿನಿಮಾ ಸುದ್ದಿ

ಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!

Harshavardhan M

ಬೆಂಗಳೂರು: ಸಾಲು ಸಾಲು ಸಿನಿಮಾ ಅವಕಾಶಗಳನ್ನು ಹೊಂದಿರುವ ನಟ ಉಪೇಂದ್ರ ಮಾಸ್ಟರ್ ಪೀಸ್ ನಿರ್ದೇಶಕ ಮಂಜು ಮಾಂಡವ್ಯ ಅವರ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಕಿಶೋರ್ ಪಾತಿಕೊಂಡ ಅವರು ಈ ಸಿನಿಮಾ ನಿರ್ಮಾಪಕರಾಗಿದ್ದಾರೆ.

ಮಂಜು ಮಾಂಡವ್ಯ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾ ಪ್ರಯೋಗಾತ್ಮಕವಾಗಿರಲಿದೆ ಎನ್ನುವ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮಂಜು ಅವರು ಉಪೇಂದ್ರ ಅವರ ಜೊತೆ ಸಿನಿಮಾ ಕುರಿತು ಮಾತುಕತೆ ನಡೆಸುತ್ತಿದ್ದು ಮುಂಬರುವ ದಿನಗಳಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಲಿದೆ. 

ಉಪೇಂದ್ರ ಅವರು ಹೋಮ್ ಮಿನಿಸ್ಟರ್ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ನಿರ್ದೇಶಕ ಆರ್ ಚಂದ್ರು ಮತ್ತು ಉಪೇಂದ್ರ ಕಾಂಬಿನೇಷನ್ ನಲ್ಲಿ ಮೂಡಿಬಂಡಿರುವ 'ಕಬ್ಜಾ' ತೆರೆಗೆ ಬರಲು ಸಿದ್ಧವಾಗಿದೆ.  

SCROLL FOR NEXT