ಭಜರಂಗಿ2 ಪೋಸ್ಟರ್ 
ಸಿನಿಮಾ ಸುದ್ದಿ

ಅಕ್ಟೋಬರ್ ನಲ್ಲಿ ಸಿನಿಪ್ರಿಯರಿಗೆ ಹಬ್ಬ: ಕೋಟಿಗೊಬ್ಬ-3 ಮತ್ತು ಸಲಗ ಒಂದೇ ದಿನ ರಿಲೀಸ್; ಭಜರಂಗಿ-2 ರಿಲೀಸ್ ಅ.29ಕ್ಕೆ!

ಅಕ್ಟೋಬರ್ ತಿಂಗಳಲ್ಲಿ ದಸರಾ ಸಂಭ್ರಮ. ಅಲ್ಲದೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಹೇರಲಾಗಿದ್ಧ ನಿರ್ಬಂಧಗಳನ್ನು ಈಗ ಸಡಿಲಿಸಿರುವುದರಿಂದ ಸಿನಿಪ್ರಿಯರ ಉತ್ಸಾಹ ಗರಿಗೆದರಿದೆ. ಅವರ ನೆಚ್ಚಿನ ನಾಯಕರ ಸಿನಿಮಾಗಳನ್ನು ದೊಡ್ಡ ಪರದೆ ಮೇಲೆ ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ. 

ಬೆಂಗಳೂರು: ಅಕ್ಟೋಬರ್ ತಿಂಗಳಲ್ಲಿ ದಸರಾ ಸಂಭ್ರಮ ಹತ್ತಿರವಾಗುತ್ತಿದ್ದಂತೆಯೇ ಮೂರು ಚಿತ್ರಗಳು ಈ ತಿಂಗಳು ಬಿಡುಗಡೆಗೆ ಸಿದ್ಧವಾಗಿವೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಹೇರಲಾಗಿದ್ಧ ನಿರ್ಬಂಧಗಳನ್ನು ಈಗ ಸಡಿಲಿಸಿರುವುದರಿಂದ ಸಿನಿಪ್ರಿಯರ ಉತ್ಸಾಹ ಗರಿಗೆದರಿದೆ. ಅವರ ನೆಚ್ಚಿನ ನಾಯಕರ ಸಿನಿಮಾಗಳನ್ನು ದೊಡ್ಡ ಪರದೆ ಮೇಲೆ ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ. 

ಕನ್ನಡ ಚಿತ್ರರಂಗದ ಇತ್ತೀಚಿನ ಬಹುನಿರೀಕ್ಷಿತ ಚಿತ್ರಗಳಾದ ಭಜರಂಗಿ2, ಕೋಟಿಗೊಬ್ಬ3 ಮತ್ತು ಸಲಗ ಅಕ್ಟೋಬರ್ ತಿಂಗಳಲ್ಲಿ ತೆರೆಗಪ್ಪಳಿಸಲಿದೆ. 

ಸುದೀಪ್ ಅಭಿನಯದ ಕೋಟಿಗೊಬ್ಬ3 ಮತ್ತು ದುನಿಯಾ ವಿಜಯ್ ಅವರ ಸಲಗ ಒಂದೇ ದಿನ ಅಂದರೆ ಅಕ್ಟೋಬರ್ 14ರಂದು ಬಿಡುಗಡೆಯಾಗುತ್ತಿರುವುದು ಈ ಸಿನಿಮಾಗಳ ಕುರಿತು ಹೆಚ್ಚಿನ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಶಿವರಾಜಕುಮಾರ್ ಅಭಿನಯದ ಭಜರಂಗಿ2 ಅಕ್ಟೋಬರ್ 29ರಂದು ಬಿಡುಗಡೆ ಕಾಣುತ್ತಿದೆ. 

ಡಾರ್ಲಿಂಗ್ ಕೃಷ್ಣ ಅಭಿನಯದ ನಾಗಶೇಖರ್ ನಿರ್ದೇಶನದ ShriKrishna@gmail.com ಸಿನಿಮಾ ಅಕ್ಟೋಬರ್ 15ರಂದು ಬಿಡುಗಡೆಯಾಗುತ್ತಿದ್ದರೆ, ಸೂರಜ್ ಗೌಡ ಅವರ ಮೊದಲ ನಿರ್ದೇಶನದ ಚಿತ್ರ 'ನಿನ್ನಾ ಸನಿಹಕೆ' ಅಕ್ಟೋಬರ್ 8ರಂದು ಬಿಡುಗಡೆ ಕಾಣುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ