'ಲೈಗರ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ವಿಜಯ್ ದೇವರಕೊಂಡ ಅಭಿನಯದ 'ಲೈಗರ್' ಚಿತ್ರದಲ್ಲಿ ಬಾಕ್ಸಿಂಗ್ ದಂತಕಥೆ 'ಮೈಕ್ ಟೈಸನ್'!

ವಿಜಯ್ ದೇವರಕೊಂಡ ಅಭಿನಯದ ಲೈಗರ್ ಚಿತ್ರದ ಮೂಲಕ ಭಾರತೀಯ ಸಿನಿರಂಗಕ್ಕೆ ಬಾಕ್ಸಿಂಗ್ ದಂತಕಥೆ 'ಮೈಕ್ ಟೈಸನ್' ಪದಾರ್ಪಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಹೈದರಾಬಾದ್: ವಿಜಯ್ ದೇವರಕೊಂಡ ಅಭಿನಯದ ಲೈಗರ್ ಚಿತ್ರದ ಮೂಲಕ ಭಾರತೀಯ ಸಿನಿರಂಗಕ್ಕೆ ಬಾಕ್ಸಿಂಗ್ ದಂತಕಥೆ 'ಮೈಕ್ ಟೈಸನ್' ಪದಾರ್ಪಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸ್ವತಃ ಅರ್ಜುನ್ ರೆಡ್ಡಿ ಖ್ಯಾತಿಯ ನಟ ವಿಜಯ್ ದೇವರಕೊಂಡ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ಶೀಘ್ರದಲ್ಲೇ ನಮ್ಮ ಲೈಗರ್ ಚಿತ್ರತಂಡವನ್ನು ಸೇರಿಕೊಳ್ಳಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

'ನಾವು ಈ ಹಿಂದೆಯೇ ನಿಮಗೆ ಮಾಡ್ನೆಸ್ ನ ಮಾತುಕೊಟ್ಟಿದ್ದೆವು. ಅದರಂತೆ ಬಾಕ್ಸಿಂಗ್ ಮ್ಯಾಡ್ನೆಸ್, ದಿ ಲೆಜೆಂಡ್, ಐರನ್ ಮ್ಯಾನ್, ಬ್ಯಾಡೆಸ್ಟ್ ಮ್ಯಾನ್ ಇನ್ ದಿ ವರ್ಲ್ಡ್, ಬಾಕ್ಸಿಂಗ್ ಸೂಪರ್ ಸ್ಟಾರ್ ಶೀಘ್ರದಲ್ಲೇ ನಮ್ಮ ಸಿನಿಮಾ ತಂಡವನ್ನು ಸೇರಿಕೊಳ್ಳಲ್ಲಿದ್ದಾರೆ ಎಂದು ವಿಜಯ್ ದೇವರಕೊಂಡ ಟ್ವೀಟ್ ಮಾಡಿದ್ದಾರೆ.

ಇನ್ನು ವಿಜಯ್ ದೇವರಕೊಂಡ ಅಭಿನಯದ ಲೈಗರ್ ಚಿತ್ರವನ್ನು ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ನಿರ್ದೇಶಿಸುತ್ತಿದ್ದು, ತೆಲುಗಿನಲ್ಲಿ ನಟಿ ಚಾರ್ಮಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಬಹುಭಾಷೆಗಳಲ್ಲಿ ಈ ಚಿತ್ರ ತೆರೆಕಾಣುತ್ತಿದ್ದು, ಹಿಂದಿಯಲ್ಲಿ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ಪೂರಿ ಜಗನ್ನಾಥ್ ಅವರ ಬ್ಯಾನರ್ ಪುರಿ ಕನೆಕ್ಟ್ಸ್ ಮೂಲಕ ಚಿತ್ರವನ್ನು ತೆರೆಮೇಲೆ ತರುತ್ತಿದ್ದಾರೆ. 

ಇನ್ನು ಚಿತ್ರದಲ್ಲಿ ಟೈಸನ್ ಪಾತ್ರದ ವಿವರಗಳನ್ನು ಇನ್ನೂ ಬಹಿರಂಗಪಡಿಸದಿದ್ದರೂ, ಟೀಸರ್ ನಲ್ಲಿನ ವೀಡಿಯೋ ಪ್ರಕಾರ ಬಾಕ್ಸಿಂಗ್ ರಿಂಗ್‌ನಲ್ಲಿ ಅವರು ದೇವರಕೊಂಡ ಪಾತ್ರವನ್ನು ಎದುರಿಸಲಿದ್ದಾರೆ ಎನ್ನಲಾಗುತ್ತಿದೆ.

ಸಾರ್ವಕಾಲಿಕ ಶ್ರೇಷ್ಠ ಹೆವಿವೇಯ್ಟ್ ಬಾಕ್ಸರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಟೈಸನ್, 2009 ರ ಹಾಲಿವುಡ್ ಹಿಟ್ ಚಿತ್ರ "ದಿ ಹ್ಯಾಂಗೋವರ್" ಮತ್ತು ಅದರ 2011 ರ ಸೀಕ್ವೆಲ್ "ದಿ ಹ್ಯಾಂಗೊವರ್ ಪಾರ್ಟ್ II" ನಲ್ಲಿ ನಟಿಸಿ ಖ್ಯಾತಿಗಳಿಸಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!