ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಬಿಡುಗಡೆ, ಭಿನ್ನ ಗೆಟಪ್ ನಲ್ಲಿ ಮಿಂಚಿದ ಕಿರಿಕ್ ಪಾರ್ಟಿ ಬೆಡಗಿ 

ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ’ ಈಗಾಗಲೇ ದೇಶದಾದ್ಯಂತ ಸುದ್ದಿ ಮಾಡುತ್ತಿದೆ.

ಪುಷ್ಪ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಗೆಟಪ್
Sumana Upadhyaya
Updated On : 29 Sept 2021, 11:02 am

ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ’ ಈಗಾಗಲೇ ದೇಶದಾದ್ಯಂತ ಸುದ್ದಿ ಮಾಡುತ್ತಿದೆ.

ಇಂದು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ರಶ್ಮಿಕಾ ಮಂದಣ್ಣ ತಮ್ಮ ಪಾತ್ರದ ಮೊದಲ ಲುಕ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅವರ ಪಾತ್ರದ ಹೆಸರು ಶ್ರೀವಲ್ಲಿ. ರಶ್ಮಿಕಾ ತಮ್ಮ ವೃತ್ತಿ ಜೀವನದಲ್ಲಿಯೇ ಸಂಪೂರ್ಣ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು, ಅವರ ನೂತನ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ವಿವಿಧ ಭಾಗಗಳಲ್ಲಿ ಚಿತ್ರ ತಯಾರಾಗುತ್ತಿದ್ದು, ಮೊದಲ ಭಾಗಕ್ಕೆ ‘ಪುಷ್ಪ ದಿ ರೈಸ್’ ಎಂದು ಹೆಸರಿಡಲಾಗಿದೆ. ಅಲ್ಲು ಅರ್ಜುನ್ ಚಿತ್ರಕ್ಕೆ ನಾಯಕ. ಖಳನಾಯಕನಾಗಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಕನ್ನಡದ ಡಾಲಿ ಧನಂಜಯ್ ಕೂಡ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರತಂಡವು ಅಲ್ಲು ಅರ್ಜುನ್ ಹಾಗೂ ಫಹಾದ್ ಫಾಸಿಲ್ ಲುಕ್, ಟೀಸರ್​ಗಳನ್ನು ಬಿಡುಗಡೆ ಮಾಡಿದೆ. ಒಂದು ಹಾಡು ಕೂಡ ಬಿಡುಗಡೆಯಾಗಿದೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments