ಸಿನಿಮಾ ಸುದ್ದಿ

ದರ್ಶನ್-ತರುಣ್ ಸುಧೀರ್ ಕಾಂಬಿನೇಷನ್ ನ ಹೊಸ ಚಿತ್ರಕ್ಕೆ 'ಕನಸಿನ ರಾಣಿ' ಮಾಲಾಶ್ರೀ ಮಗಳು ನಾಯಕಿ!

ದರ್ಶನ್ ತೂಗುದೀಪ ಅವರ ಕ್ರಾಂತಿ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿರುವ ಮಧ್ಯೆ ಅವರ ಹೊಸ ಚಿತ್ರದ ಮುಹೂರ್ತ ಇಂದು ವರಮಹಾಲಕ್ಷ್ಮಿ ಹಬ್ಬದ ದಿನ ನಗರದ ದೇವಸ್ಥಾನವೊಂದರಲ್ಲಿ ನೆರವೇರಿತು. 

ದರ್ಶನ್ ತೂಗುದೀಪ ಅವರ ಕ್ರಾಂತಿ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿರುವ ಮಧ್ಯೆ ಅವರ ಹೊಸ ಚಿತ್ರದ ಮುಹೂರ್ತ ಇಂದು ವರಮಹಾಲಕ್ಷ್ಮಿ ಹಬ್ಬದ ದಿನ ನಗರದ ದೇವಸ್ಥಾನವೊಂದರಲ್ಲಿ ನೆರವೇರಿತು. 

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದು, ಆರ್ಟ್ ಆಫ್ ಲಿವಿಂಗ್ ನ ರವಿಶಂಕರ ಗುರೂಜಿಯವರು ಚಿತ್ರದ ಮುಹೂರ್ತಕ್ಕೆ ಚಾಲನೆ ನೀಡಿದರು. ದರ್ಶನ್ ಮತ್ತು ತರುಣ್ ಸುಧೀರ್ ಕಾಂಬಿನೇಷನ್ ನ ಮತ್ತೊಂದು ಚಿತ್ರವಿದು.

ಮಾಲಾಶ್ರೀ ಮಗಳು ಚಿತ್ರರಂಗಕ್ಕೆ ಪಾದಾರ್ಪಣೆ: ಇದಿಷ್ಟೇ ವಿಷಯವಲ್ಲ. ಕನ್ನಡ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿ 90ರ ದಶಕದಲ್ಲಿ ಆಳಿದ ಕನಸಿನ ರಾಣಿ ಮಾಲಾಶ್ರೀಯವರ ಮಗಳು ರಾಧನಾ ರಾಮ್ ಈ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ತಾರಾ ದಂಪತಿ ಕೋಟಿ ನಿರ್ಮಾಪಕ ರಾಮು ಮತ್ತು ಮಾಲಾಶ್ರೀಯವರ ಮಗಳು ಚಿತ್ರರಂಗಕ್ಕೆ ಕಾಲಿಡುತ್ತಿರುವುದು ವಿಶೇಷ.

ಈ ಚಿತ್ರದ ಮೂಲಕ ಅನನ್ಯ ಅವರ ಹೆಸರು ರಾಧನಾ ರಾಮ್ ಎಂದು ಜನರಿಗೆ ಪರಿಚಯವಾಗಲಿದೆ. ದಶಕಗಳ ಕಾಲ ಕನ್ನಡ ಪ್ರೇಕ್ಷಕರನ್ನು ರಂಜಿಸಿ ಮೋಡಿ ಮಾಡಿದ್ದ ಮಾಲಾಶ್ರೀಯವರ ಮಗಳು ಕೂಡ ಸ್ಯಾಂಡಲ್ ವುಡ್ ನಲ್ಲಿ ಕಮಾಲ್ ಮಾಡಲಿದ್ದಾರೆಯೇ ಎಂದು ನೋಡಬೇಕಿದೆ.

ಚಿತ್ರದ ಮುಹೂರ್ತದಲ್ಲಿ ಮಾತನಾಡಿದ ನಾಯಕ ದರ್ಶನ್ ರಾಬರ್ಟ್ ಚಿತ್ರತಂಡ ಮತ್ತೆ ಒಂದಾಗುತ್ತಿದ್ದು, ಚಿತ್ರದ ಶೀರ್ಷಿಕೆ ಸದ್ಯದಲ್ಲಿಯೇ ಬಹಿರಂಗಪಡಿಸುತ್ತೇವೆ. ಹೊಸ ಬಗೆಯ ಕಥೆ ಹೊಂದಿರುತ್ತದೆ ಎಂದಷ್ಟೇ ಹೇಳಿದರು. 

ನಾಯಕಿ ರಾಧನ್ ರಾಮ್ ಅವರ ತಾಯಿ ಹಿರಿಯ ನಟಿ ಮಾಲಾಶ್ರೀ, ನನಗೆ ಕನ್ನಡಿಗರು ನೀಡಿದ ಪ್ರೀತಿ ಅಪಾರ, ನನಗೆ ನೀಡಿದ ಪ್ರೀತಿಯನ್ನು ಮಗಳಿಗೂ ಕೊಡಿ ಎಂದು ಕೇಳಿಕೊಂಡರು. 

ಇನ್ನು ದರ್ಶನ್ ಅಭಿಮಾನಿಗಳಿಗಾಗಿ ಇಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರತಂಡ ಕ್ರಾಂತಿ ಚಿತ್ರದ ಹೊಸ ಪೋಸ್ಟರ್ ನ್ನು ಬಿಡುಗಡೆ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT