ಚಂದನ್ ಶೆಟ್ಟಿ 
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ ನಟನೆಯ 'ಎಲ್ರ ಕಾಲೆಳೆಯುತ್ತೆ ಕಾಲ' ಸಿನಿಮಾದ ಮೊದಲ ಹಾಡು ರಿಲೀಸ್

ಚಂದನ್‌ ಶೆಟ್ಟಿ ನಾಯಕರಾಗಿ ನಟಿಸಿರುವ ‘ಎಲ್ರ ಕಾಲೆಳೆಯತ್ತೆ ಕಾಲ’ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧವಾಗುತ್ತಿದೆ.

ಚಂದನ್‌ ಶೆಟ್ಟಿ ನಾಯಕರಾಗಿ ನಟಿಸಿರುವ ‘ಎಲ್ರ ಕಾಲೆಳೆಯತ್ತೆ ಕಾಲ’ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧವಾಗುತ್ತಿದೆ.

ಉಷಾ ಗೋವಿಂದರಾಜು ನಿರ್ಮಾಣದ ಸುಜಯ್‌ ಶಾಸ್ತ್ರಿ ನಿರ್ದೇಶಿಸಿದ್ದಾರೆ. ನಾಯಕ ಚಂದನ್‌ ಶೆಟ್ಟಿಗೆ ಅರ್ಚನಾ ಕೊಟ್ಟಿಗೆ ನಾಯಕಿ. “ನಮ್ಮ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದೆ. ಸದ್ಯದಲ್ಲೇ ಮೊದಲ ಪ್ರತಿ ಬರಲಿದೆ. ಪ್ರಚಾರ ಕಾರ್ಯ ಶುರುವಾಗಿದ್ದು, ಚಿತ್ರದ ಮೊದಲ ಹಾಡು, ಗೋಲ್ಡ್‌ ಫ್ಯಾಕ್ಟರಿ ಬಿಡುಗಡೆಯಾಗಿದೆ.  

ಅದೊಂದು ಮದುವೆಯ ಆರತಕ್ಷತೆಯ ಹಾಡು. ರಾಜಗುರು ಹೊಸಕೋಟೆ ಬರೆದಿರುವ ಈ ಹಾಡನ್ನು ಗುರುರಾಜ ಹೊಸಕೋಟೆ, ಪ್ರವೀಣ್‌ – ಪ್ರದೀಪ್‌ ಹಾಡಿದ್ದಾರೆ. ಮುಂದೆ‌ ಐದು ಅಥವಾ 10 ದಿನಗಳಿಗೊಮ್ಮೆ ಚಿತ್ರದ ಹಾಡು ಅಥವಾ ಕಂಟೆಂಟ್‌ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರವನ್ನು ಮುಂದುವರೆಸುತ್ತೇವೆ.

ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ. ಇಡೀ ಚಿತ್ರ ವಿಭಿನ್ನವಾಗಿ ಮತ್ತು ನಾವು ಅಂದು ಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿಬಂದಿದೆ. ನಿರ್ಮಾಪಕರು ಮತ್ತು ಚಿತ್ರತಂಡದವರ ಸಹಕಾರವಿಲ್ಲದಿದ್ದರೆ, ಈ ಸಿನಿಮಾ ಸಾಧ್ಯವಾಗುತ್ತಿರಲಿಲ್ಲ’ ಎನ್ನುವುದು ನಿರ್ದೇಶಕ ಸುಜಯ್‌ ಶಾಸ್ತ್ರಿ ಮಾತು.

ನಾಯಕ ಚಂದನ್‌ ಶೆಟ್ಟಿ ಕೂಡಾ ಈ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಮ್ಮ ಚಿತ್ರದ ಮೊದಲ ಹಾಡು ಗೋಲ್ಡ್‌ ಫ್ಯಾಕ್ಟರಿ ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿ ಬಂದಿದೆ. ಇದೊಂದು ವಿಭಿನ್ನವಾದ ಚಿತ್ರ. ಸುಜಯ್‌ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದರು. ಉಳಿದಂತೆ ಚಿತ್ರತಂಡ ತಮ್ಮ ಅನುಭವ ಹಂಚಿಕೊಂಡಿತು.

ನಾನೊಬ್ಬ ಹಾಸ್ಯ ನಟನಾದ ನಾನು ಇತರ ಹಾಸ್ಯನಟರ ನಾಡಿಮಿಡಿತವನ್ನು ಸಹ ಅರ್ಥಮಾಡಿಕೊಳ್ಳಬಲ್ಲೆ ಮತ್ತು ಪ್ರತಿಯೊಬ್ಬರೂ ತಮ್ಮದೇ ಆದ ಜಾಗದಲ್ಲಿ ಹೈಲೈಟ್ ಆಗಿದ್ದಾರೆ, ಎಂದು ಸುಜಯ್ ಶಾಸ್ತ್ರಿ ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT