ಲೈಗರ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ವಿಜಯ ದೇವರಕೊಂಡ ನಟನೆಯ 'ಲೈಗರ್' ಕನ್ನಡ ವಿತರಣಾ ಹಕ್ಕು ಪಡೆದ ನಿರ್ಮಾಪಕ ಬಿ.ಕೆ ಜಗದೀಶ್

ಈ ಹಿಂದೆ ವಿಜಯ್ ದೇವರಕೊಂಡ ಅವರ ಗೀತ ಗೋವಿಂದಂ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಿಸಿದ್ದ ಖ್ಯಾತ ನಿರ್ಮಾಪಕ, ಬಿಕೆ ಗಂಗಾಧರ್ ಅವರು, ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಪ್ರಾಜೆಕ್ಟ್ ಲೈಗರ್ ವಿತರಣಾ ಹಕ್ಕುಗಳನ್ನು ಪಡೆದಿದ್ದಾರೆ.

ಈ ಹಿಂದೆ ವಿಜಯ್ ದೇವರಕೊಂಡ ಅವರ ಗೀತ ಗೋವಿಂದಂ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಿಸಿದ್ದ ಖ್ಯಾತ ನಿರ್ಮಾಪಕ, ಬಿಕೆ ಗಂಗಾಧರ್ ಅವರು, ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಪ್ರಾಜೆಕ್ಟ್ ಲೈಗರ್ ವಿತರಣಾ ಹಕ್ಕುಗಳನ್ನು ಪಡೆದಿದ್ದಾರೆ.

ಪುರಿ ಜಗನ್ನಾಥ್ ನಿರ್ದೇಶನದ ಚಿತ್ರವು ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ ಮತ್ತು ವಿತರಕರು ಚಿತ್ರವನ್ನು ರಾಜ್ಯಾದ್ಯಂತ ಎಲ್ಲಾ ಭಾಷೆಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದಾರೆ. ಈ ವಿಷಯವನ್ನು ಸ್ವತಃ ಗಂಗಾಧರ್ ಅವರೇ ಖಚಿತ ಪಡಿಸಿದ್ದಾರೆ.

ವಿಜಯ್ ದೇವರಕೊಂಡ ಅವರು ಲೈಗರ್ ತಂಡದೊಂದಿಗೆ ಆಗಸ್ಟ್‌ನಲ್ಲಿ ಅದ್ಧೂರಿ ಪ್ರಿ-ರಿಲೀಸ್ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ. ಪುರಿ ಜಗನ್ನಾಥ ನಿರ್ದೇಶದ ಸಿನಿಮಾದಲ್ಲಿ ಚೊಚ್ಚಲ ಬಾರಿಗೆ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್  ನಿರ್ಮಿಸಿರುವ ಚಿತ್ರದಲ್ಲಿ ಅನನ್ಯ ಪಾಂಡೆ ನಾಯಕಿಯಾಗಿ ನಟಿಸಿದ್ದಾರೆ ಮತ್ತು ರಮ್ಯಾ ಕೃಷ್ಣನ್ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರದಲ್ಲಿ ಬಾಕ್ಸರ್ ಮೈಕ್ ಟೈಸನ್ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT