ಚೈತ್ರಾ ಆಚಾರ್ 
ಸಿನಿಮಾ ಸುದ್ದಿ

'ಸಪ್ತಸಾಗರದಾಚೆ ಎಲ್ಲೋ’ ಚಿತ್ರ ತಂಡಕ್ಕೆ 'ಗಿಲ್ಕಿ' ನಟಿ ಚೈತ್ರಾ ಆಚಾರ್ ಸೇರ್ಪಡೆ

ಹೇಮಂತ್ ಎಂ. ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಚಿತ್ರಕ್ಕೆ ಹೊಸ ನಾಯಕಿಯ ಆಗಮನವಾಗಿದೆ. ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾ ಸೆಪ್ಬಂಬರ್ ತಿಂಗಳಲ್ಲಿ ಪುನಾರಂಭವಾಗಲಿದೆ.

ಹೇಮಂತ್ ಎಂ. ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಚಿತ್ರಕ್ಕೆ ಹೊಸ ನಾಯಕಿಯ ಆಗಮನವಾಗಿದೆ. ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾ ಸೆಪ್ಬಂಬರ್  ತಿಂಗಳಲ್ಲಿ ಪುನಾರಂಭವಾಗಲಿದೆ.

ಹೇಮಂತ್ ರಾವ್ ನಿರ್ದೇಶನದ ಈ ಚಿತ್ರದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜೋಡಿಯಾಗಿ ರುಕ್ಮಿಣಿ ವಸಂತ್ ಬಣ್ಣ ಹಚ್ಚಿದ್ದಾರೆ. ಇದೀಗ ಇವರ ಜತೆಗೆ ಮತ್ತೊಬ್ಬ ನಟಿಯ ಆಗಮನವಾಗಿದೆ. ಬೆಂಗಳೂರಿನ ಹುಡುಗಿ ನಾಯಕಿಯಾಗಿ ರಕ್ಷಿತ್ ಶೆಟ್ಟಿ ತಂಡಕ್ಕೆ ಆಗಮಿಸಿದ್ದಾರೆ. ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ಸುರಭಿ ಪಾತ್ರಕ್ಕೆ ಚೈತ್ರಾ ಜೆ. ಆಚಾರ್ ಆಯ್ಕೆ ಆಗಿದ್ದಾರೆ.

‘ಮಹೀರ’, ‘ಆ ದೃಶ್ಯ’, ‘ತಲೆತಂಡ’ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಈಗಾಗಲೇ ಚೈತ್ರಾ ನಟಿಸಿದ್ದಾರೆ. ಸೀರೆ ಉಟ್ಟು ಮಲ್ಲಿಗೆ ಮುಡಿದ ಸುರಭಿಯ ಫಸ್ಟ್ ಲುಕ್ ಪೋಸ್ಟರ್ ಕೂಡ ರಿವೀಲ್ ಆಗಿದೆ. ರಕ್ಷಿತ್ ಶೆಟ್ಟಿ ಎರಡು ವಿಭಿನ್ನ ಲುಕ್‌ಗಳನ್ನು ಹೊಂದಿರುವ ಈ ಚಿತ್ರದಲ್ಲಿ ಚೈತ್ರಾ ಸುರಭಿಯಾಗಿ ಕಾಣಿಸಿಕೊಳ್ಳಲಿದ್ದಾರೆ, ಅವರು ಕಥೆಯ ಎರಡನೇ ಭಾಗದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಅವರು ಉತ್ತಮ ಗಾಯಕಿ ಕೂಡ ಆಗಿದ್ದು, ಅವರ ಗಾಯನ ಪ್ರತಿಭೆಯನ್ನು ನಮ್ಮ ಸಿನಿಮಾದಲ್ಲಿ ಬಳಸಿಕೊಳ್ಳುತ್ತೇವೆ ಎಂದು  ನಿರ್ದೇಶಕರು ತಿಳಿಸಿದ್ದಾರೆ, ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾ ಜೋಡಿ ಮತ್ತೆ ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ಮತ್ತೆ ಒಂದಾಗಿದೆ.  ಪರಮಾವ್ ಸ್ಟುಡಿಯೋಸ್‌ನಿಂದ ನಿರ್ಮಾಣಗೊಂಡಿರುವ ಈ ರೋಮ್ಯಾಂಟಿಕ್ ಸಿನಿಮಾಗೆ ಚರಣ್ ರಾಜ್ ಸಂಗೀತ ನೀಡಲಿದ್ದಾರೆ. ಚಿತ್ರದ ಛಾಯಾಗ್ರಹಣವನ್ನು ಅಧ್ವೈತ ಗುರುಮೂರ್ತಿ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT