ತ್ರಿಷಾ 
ಸಿನಿಮಾ ಸುದ್ದಿ

ರಾಜಕೀಯಕ್ಕೆ ತ್ರಿಷಾ ಕೃಷ್ಣನ್‌ ಎಂಟ್ರಿ: 'ಕೈ' ಹಿಡಿಯಲಿದ್ದಾರಾ 'ಪವರ್' ನಟಿ ! ಪಾಲಿಟಿಕ್ಸ್ ಗೆ ಸೇರಲು ತಮಿಳು ನಟ ಕಾರಣ?

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್‌ ರಾಜಕೀಯ ಪ್ರವೇಶ ಮಾಡಲು ಮುಂದಾಗಿದ್ದು, ಅವರು ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್‌ ರಾಜಕೀಯ ಪ್ರವೇಶ ಮಾಡಲು ಮುಂದಾಗಿದ್ದು, ಅವರು ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿದೆ.

ತ್ರಿಷಾ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ತಮಿಳುನಾಡು ಕಾಂಗ್ರೆಸ್‌ ಪಕ್ಷದ ಮೂಲಗಳು ಖಚಿತಪಡಿಸಿವೆ. ಈ ನಡುವೆ ತ್ರಿಷಾ ಡಿಎಂಕೆ ಅಥವಾ ಎಐಎಡಿಎಂಕೆ ಬಿಟ್ಟು ಕಾಂಗ್ರೆಸ್ ಪಕ್ಷ ಯಾಕೆ ಸೇರುತ್ತಿದ್ದಾರೆ ಎಂದು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸದ್ಯ ತ್ರಿಷಾಗೆ ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಗಿರುವುದಕ್ಕೆ ಅವರು ಪೂರ್ಣ ಪ್ರಮಾಣದಲ್ಲಿ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂದು ಎನ್ನಲಾಗಿದೆ. ಈಗಾಗಲೇ ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿ ಖ್ಯಾತರಾಗಿದ್ದಾರೆ. ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ತ್ರಿಷಾಗೆ ತಮಿಳುನಾಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಇರುವುದರಿಂದ ಅವರು ತಮ್ಮ ರಾಜಕೀಯ ಜೀವನವನ್ನು ಇಲ್ಲಿಂದಲೇ ಪ್ರಾರಂಭ ಮಾಡಲಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ಕಾಂಗ್ರೆಸ್‌ ಸೇರುವ ಬಗ್ಗೆ ತ್ರಿಷಾ ಖಚಿತಪಡಿಸಲಿದ್ದಾರೆ. ರಾಹುಲ್‌ ಗಾಂಧಿ ತಮಿಳುನಾಡು ಪ್ರವಾಸ ಮಾಡುವ ಸಂದರ್ಭದಲ್ಲಿ ಅವರು ಪಕ್ಷಕ್ಕೆ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ತೆಲುಗು, ತಮಿಳು ಭಾಷೆಗಳಲ್ಲಿ ತ್ರಿಶಾ ಸ್ಟಾರ್ ಹೀರೋಯಿನ್ ಆಗಿ ಮಿಂಚಿದ್ದು ಗೊತ್ತೇ ಇದೆ. ಬಹುತೇಕ ಎಲ್ಲಾ ಸ್ಟಾರ್ ಹೀರೋಗಳ ಎದುರು ನಾಯಕಿಯಾಗಿ ತ್ರಿಷಾ ನಟಿಸಿದ್ದರು. ಈ ಹಿಂದೆ ಮಾರಾಟವಾಗುವ ಸಿನಿಮಾಗಳ ಆವೇಗ ಕೊಂಚ ಕಡಿಮೆಯಾಗಿದೆ ಎಂದೇ ಹೇಳಬೇಕು. ಇತ್ತೀಚೆಗೆ ತ್ರಿಷಾ ತೆಲುಗು ಚಿತ್ರಗಳಿಂದ ದೂರ ಉಳಿದಿದ್ದಾರೆ. ತಮಿಳಿನಲ್ಲಿ ಲೇಡಿ ಓರಿಯೆಂಟೆಡ್ ಸಿನಿಮಾಗಳನ್ನು ಮಾಡುವ ಮೂಲಕ ತ್ರಿಷಾ ರಂಜಿಸಿದ್ದಾರೆ.

ಅಲ್ಲದೇ ತ್ರಿಷಾ ರಾಜಕೀಯ ಪ್ರವೇಶದ ಹಿಂದೆ ದಳಪತಿ ವಿಜಯ್ ಕೈವಾಡವಿದೆ ಎಂಬ ಸುದ್ದಿ ಕೂಡ ಕಾಲಿವುಡ್ ನಲ್ಲಿ ಕೇಳಿ ಬರುತ್ತಿದೆ. ತ್ರಿಷಾಗೆ ರಾಜಕೀಯಕ್ಕೆ ಬರುವಂತೆ ಪ್ರೋತ್ಸಾಹ ನೀಡುತ್ತಿದ್ದಾರೆ ಎನ್ನಲಾಗಿದೆ. ಮತ್ತು ಈ ಸುದ್ದಿಯಲ್ಲಿ ಸತ್ಯ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ