ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಆಡಿಯೋ ಬೃಹತ್ ಮೊತ್ತಕ್ಕೆ ಸೇಲ್ 
ಸಿನಿಮಾ ಸುದ್ದಿ

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಆಡಿಯೋ ಬೃಹತ್ ಮೊತ್ತಕ್ಕೆ ಸೇಲ್!

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ರಿಲೀಸ್ ಗೂ ಮುನ್ನವೇ ಸದ್ದು ಮಾಡುತ್ತಿದೆ. ಚಿತ್ರದ ಸಂಗೀತ ಹಕ್ಕುಗಳನ್ನು ಆನಂದ್ ಆಡಿಯೊ ಸಂಸ್ಥೆಯು 1 ಕೋಟಿ ರೂಪಾಯಿಗೆ ಪಡೆದುಕೊಂಡಿದೆ.

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ರಿಲೀಸ್ ಗೂ ಮುನ್ನವೇ ಸದ್ದು ಮಾಡುತ್ತಿದೆ. ಚಿತ್ರದ ಸಂಗೀತ ಹಕ್ಕುಗಳನ್ನು ಆನಂದ್ ಆಡಿಯೊ ಸಂಸ್ಥೆಯು 1 ಕೋಟಿ ರೂಪಾಯಿಗೆ ಪಡೆದುಕೊಂಡಿದೆ.

ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾ ಬಗ್ಗೆ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದುನಿಯಾ ಸೂರಿ ನಿರ್ದೇಶನ ಮಾಡಿರೋದ್ರಿಂದ ಸಹಜವಾಗಿಯೇ ಕೂತೂಹಲ ಗರಿಗೆದರಿದೆ. ಸದ್ಯ ಇವರಿಬ್ಬರ ಕಾಂಬಿನೇಷನ್‌ 'ಬ್ಯಾಡ್ ಮ್ಯಾನರ್ಸ್' ಸಿನಿಮಾ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್‌ನಲ್ಲಿ ಬ್ಯುಸಿಯಾಗಿದೆ.

ಮಾಸ್ ಲುಕ್‌ನಲ್ಲಿ ಬ್ಯಾಡ್ ಮ್ಯಾನರ್ಸ್ ಮೂಲಕ ಎಂಟ್ರಿ ಕೊಡುವುದಕ್ಕೆ ಅಭಿಷೇಕ್ ಸಜ್ಜಾಗಿದ್ದಾರೆ. ಇನ್ನೂ ಪ್ರಚಾರ ಶುರು ಮಾಡುವ ಮೊದಲೇ 'ಬ್ಯಾಡ್ ಮ್ಯಾನರ್ಸ್'ಗೆ ಬೇಡಿಕೆ ಹೆಚ್ಚಾಗಿದೆ. ಆಡಿಯೋ ಬೃಹತ್ ಮೊತ್ತಕ್ಕೆ ಸೇಲ್ ಆಗಿದೆ.

ಆನಂದ್ ಆಡಿಯೋ 'ಬ್ಯಾಡ್ ಮ್ಯಾನರ್ಸ್' ಸಿನಿಮಾ ಆಡಿಯೋ ಹಕ್ಕುಗಳನ್ನು ಸುಮಾರು 1 ಕೋಟಿ ರೂ.ಗೆ ಪಡೆದುಕೊಂಡಿದೆ ಎನ್ನಲಾಗಿದೆ. ಆನಂದ್ ಆಡಿಯೋ ಮಾಲೀಕರೊಂದಿಗೆ ಅಭಿಷೇಕ್ ಅಂಬರೀಶ್ ಹಾಗೂ ನಿರ್ಮಾಪಕ ಸುಧೀರ್ ಒಪ್ಪಂದ ಮಾಡಿಕೊಂಡ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಚಿತಾ ರಾಮ್ ಮತ್ತು ಪ್ರಿಯಾಂಕಾ ಕುಮಾರ್ ನಟಿಸಿರುವ ಈ ಚಿತ್ರಕ್ಕೆ ಶೇಖರ್ ಎಸ್ ಅವರ ಛಾಯಾಗ್ರಹಣವಿದೆ. ಇನ್ನು ಎರಡು ಹಾಡುಗಳು ಮತ್ತು ಕೆಲವು ಪ್ಯಾಚ್‌ವರ್ಕ್ ಉಳಿದಿವೆ, ಇದನ್ನು 15 ದಿನಗಳ ಶೂಟಿಂಗ್ ಬಾಕಿ ಉಳಿದಿದ್ದು, ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣ ಮುಗಿಸಲು ಯೋಜನೆ ಹಾಕಿಕೊಂಡಿದ್ದೇವೆ’  ಎಂದು ಕೆಎಂ ಸುಧೀರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT