ನನ್ನ ಹುಡುಕಿ ಕೊಡಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ವೇಮಗಲ್ ಜಗನ್ನಾಥ ರಾವ್ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ 'ನನ್ನ ಹುಡುಕಿ ಕೊಡಿ' ಟೈಟಲ್ ನ ಹೊಸ ಸಿನಿಮಾ!

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಯುವ ನಟ ಧನ್ವಿತ್ ಅಭಿನಯದ ಜೊತೆ ನಿರ್ಮಾಣ ಮಾಡುತ್ತಿದ್ದಾರೆ. ಮೀನಾಕ್ಷಿ ಜೈಸ್ವಾಲ್ ಹಾಗೂ ಸಾಯಿ ನಯನ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ಪೋಷಕ ಪಾತ್ರಗಳಲ್ಲಿ ಕನ್ನಡದ ಪ್ರಸಿದ್ಧ ಕಲಾವಿದರು ಅಭಿನಯಿಸಲಿದ್ದಾರೆ ಎಂದರು.

ಕನ್ನಡ ಚಿತ್ರರಂಗಕ್ಕೆ ತುಳಸಿದಳ ಸಿನಿಮಾ‌ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ಬಹಳ ದಿನಗಳ ನಂತರ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದೊಂದಿಗೆ ಮತ್ತೆ ಬಂದಿದ್ದಾರೆ. ಚಿತ್ರಕ್ಕೆ 'ನನ್ನ ಹುಡುಕಿ ಕೊಡಿ' ಎಂಬ ಟೈಟಲ್ ಇಡಲಾಗಿದೆ.

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಯುವ ನಟ ಧನ್ವಿತ್ ಅಭಿನಯದ ಜೊತೆ ನಿರ್ಮಾಣ ಮಾಡುತ್ತಿದ್ದಾರೆ. ಮೀನಾಕ್ಷಿ ಜೈಸ್ವಾಲ್ ಹಾಗೂ ಸಾಯಿ ನಯನ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ಪೋಷಕ ಪಾತ್ರಗಳಲ್ಲಿ ಕನ್ನಡದ ಪ್ರಸಿದ್ಧ ಕಲಾವಿದರು ಅಭಿನಯಿಸಲಿದ್ದಾರೆ ಎಂದರು.

ನಟ ಧನ್ವಿತ್ ಮಾತನಾಡಿ, ನಾನು ಮೂಲತಃ ಕನಕಪುರದವನು. ಹಿಂದೆ ವೇಮಗಲ್ ಜಗನ್ನಾಥ ರಾವ್ ಅವರ ನಿರ್ದೇಶನದ 'ಆವರ್ತ' ಚಿತ್ರದಲ್ಲಿ ಒಂದು ಪಾತ್ರ ಮಾಡಿದ್ದೆ‌. ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಧನ್ವಿತ್ ಫಿಲಂ ಫ್ಯಾಕ್ಟರಿ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಾನೇ ನಿರ್ಮಾಣ ಮಾಡುತ್ತಿದ್ದೇನೆ. ವಾಸುಕಿ ಭುವನ್ ಅವರು ನಿರ್ಮಾಣಕ್ಕೆ ಜೊತೆಯಾಗಿದ್ದಾರೆ. ನಿರ್ದೇಶಕರು ಪೂರ್ತಿ ಕಥೆ ಹೇಳಿಲ್ಲ. ತುಂಬಾ ಚೆನ್ನಾಗಿದೆ ಅಭಿನಯದ ಜೊತೆಗೆ ಈ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದೇನೆ ಎಂದರು.

ಬೆಂಗಳೂರು, ಕೇರಳ, ಕಾರವಾರ ಮತ್ತು ಕೆಲವು ವಿದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ. ನಿರ್ಮಾಪಕರು ಛಾಯಾಗ್ರಾಹಕ ಸೂರ್ಯಕಾಂತ್ ಅವರನ್ನು ಕರೆತಂದಿದ್ದಾರೆ ಮತ್ತು ಉಳಿದ ತಾರಾಗಣ ಮತ್ತು ಸಿಬ್ಬಂದಿಯ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!