ಅನುಪಮಾ ಪರಮೇಶ್ವರನ್ 
ಸಿನಿಮಾ ಸುದ್ದಿ

ಕನ್ನಡದ ನಟಸೌರ್ವಭೌಮ ಚಿತ್ರದಲ್ಲಿ ನಟಿಸಿದ್ದ ನಟಿ ಅನುಪಮಾ ಪರಮೇಶ್ವರನ್‌ಗೆ ಕೋವಿಡ್ ದೃಢ!

ನಿಖಿಲ್ ಸಿದ್ಧಾರ್ಥ ಮತ್ತು ಅನುಪಮಾ ಪರಮೇಶ್ವರನ್ ಅಭಿನಯದ ಕಾರ್ತಿಕೇಯ 2 ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿದೆ. ಹೀಗಾಗಿ ಇಡೀ ಚಿತ್ರತಂಡ ಚಿತ್ರದ ಯಶಸ್ಸನ್ನು ಆಚರಿಸುವ ಗುಂಗಿನಲ್ಲಿದ್ದರೆ, ನಟಿ ಅನುಪಮಾ ಪರಮೇಶ್ವರನ್ ಅವರಿಗೆ ದುರದೃಷ್ಟವಶಾತ್ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮುಂಬೈ: ನಿಖಿಲ್ ಸಿದ್ಧಾರ್ಥ ಮತ್ತು ಅನುಪಮಾ ಪರಮೇಶ್ವರನ್ ಅಭಿನಯದ ಕಾರ್ತಿಕೇಯ 2 ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿದೆ. ಹೀಗಾಗಿ ಇಡೀ ಚಿತ್ರತಂಡ ಚಿತ್ರದ ಯಶಸ್ಸನ್ನು ಆಚರಿಸುವ ಗುಂಗಿನಲ್ಲಿದ್ದರೆ, ನಟಿ ಅನುಪಮಾ ಪರಮೇಶ್ವರನ್ ಅವರಿಗೆ ದುರದೃಷ್ಟವಶಾತ್ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅನುಪಮಾ ಅವರು ಕಾರ್ತಿಕೇಯ 2ರ ಪ್ರಚಾರದ ಭಾಗವಾಗಿ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಸುದೀರ್ಘ ಪ್ರವಾಸದಲ್ಲಿ ತೊಡಗಿದ್ದರು. ಆದಾಗ್ಯೂ, ಅವರು ತಮ್ಮ ಪ್ರಚಾರಗಳನ್ನು ಮುಗಿಸಿದ ಸುಮಾರು ಒಂದು ವಾರದ ನಂತರ, ಶೀತ ಮತ್ತು ಕೆಮ್ಮಿನಂತಹ ರೋಗಲಕ್ಷಣಗಳನ್ನು ಹೊಂದಲು ಪ್ರಾರಂಭಿಸಿದ್ದರು.
ಹೀಗಾಗಿ ಪರೀಕ್ಷೆಗೆ ಒಳಪಡಿಸಿದಾಗ ಆಕೆಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಬೆಳಕಿಗೆ ಬಂದಿದೆ.

ಪ್ರಚಾರದ ಸಮಯದಲ್ಲಿ ನಿಯಮಿತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲ್ಗೊಂಡಿದ್ದಾಗ ಅವರಿಗೆ ವೈರಸ್‌ ತಗುಲಿದೆ ಎಂದು ವರದಿಯಾಗಿದೆ. ಸದ್ಯ ಅನುಪಮಾ ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದು, ಇತ್ತೀಚಿನ ವರದಿಗಳ ಪ್ರಕಾರ, ಅವರು ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಅನುಪಮಾ ಪರಮೇಶ್ವರನ್ ತೆಲುಗು ಚಿತ್ರರಂಗದಲ್ಲಿ ಶತಮಾನಂ ​​ಭವತಿ ಮತ್ತು ಪ್ರೇಮಂನಂತಹ ಚಲನಚಿತ್ರಗಳ ಮೂಲಕ ಸ್ಟಾರ್‌ಗಿರಿ ದಕ್ಕಿಸಿಕೊಂಡವರು. ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿರುವ ಬಟರ್‌ಫ್ಲೈನಲ್ಲಿ, ಸತೀಶ್ ಕಾಸೆಟ್ಟಿ ನಿರ್ದೇಶನದ ಮರೀಚಿಕಾ ಮತ್ತು ನಿಖಿಲ್ ಜೊತೆಗಿನ 18 ಪೇಜಸ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT