ಮನ್ ದೀಪ್ ರಾಯ್ 
ಸಿನಿಮಾ ಸುದ್ದಿ

ಬೆಂಗಳೂರು: ಹಿರಿಯ ಹಾಸ್ಯ ನಟ ಮನದೀಪ್ ರಾಯ್‌ಗೆ ಹೃದಯಾಘಾತ

ಕನ್ನಡದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿಗ್ಗಜ ಕಲಾವಿದರ ಜೊತೆ ನಟಿಸಿದ ಕನ್ನಡದ ಹಿರಿಯ ನಟ ಮನ್‌ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದೆ. ಕನ್ನಡದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

500 ಕ್ಕೂ ಅಧಿಕ ಸಿನಿಮಾಗಳಲ್ಲಿ ಪೋಷಕ ನಟರಾಗಿ ಮನ್‌ದೀಪ್ ರಾಯ್ ನಟಿಸಿದ್ದಾರೆ. ಆದರೆ ಈಗ ಚಿಕಿತ್ಸೆಗೆ ಹಣವಿಲ್ಲದೇ ಸಂಕಷ್ಟಕ್ಕೆ ಸಿಲುಕಿರುವುದಾಗಿ ವರದಿಯಾಗಿದೆ. ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ ಚಿತ್ರೋದ್ಯಮಕ್ಕೆ ತಿಳಿಯುತ್ತಿದ್ದಂತೆಯೇ ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಹಲವರು ಹಾರೈಸಿದ್ದಾರೆ. ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಮನದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿರುವ ಮನದೀಪ್ ರಾಯ್, ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು. ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!