ಅವಘಡ ನಡೆದ ಸಿನಿಮಾ ಸೆಟ್ 
ಸಿನಿಮಾ ಸುದ್ದಿ

ವಿಜಯ ಸೇತುಪತಿ ನಟನೆಯ ಸಿನಿಮಾ ಶೂಟಿಂಗ್ ವೇಳೆ ದುರಂತ: ಸ್ಟಂಟ್ ಮಾಸ್ಟರ್ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಸಿನಿಮಾದ ಸಾಹಸ ಸನ್ನಿವೇಶದ ಚಿತ್ರೀಕರಣ ವೇಳೆ ಆದ ಅವಘಡದಲ್ಲಿ ಸ್ಟಂಟ್‌ ಮ್ಯಾನ್‌ ಮಾಸ್ಟರ್ ಸಾವನ್ನಪ್ಪಿರುವ ಘಟನೆ ಚೆನ್ನೈ ನಲ್ಲಿ ನಡೆದಿದೆ

ಚೆನ್ನೈ: ಸಿನಿಮಾದ ಸಾಹಸ ಸನ್ನಿವೇಶದ ಚಿತ್ರೀಕರಣ ವೇಳೆ ಆದ ಅವಘಡದಲ್ಲಿ ಸ್ಟಂಟ್‌ ಮ್ಯಾನ್‌ ಮಾಸ್ಟರ್ ಸಾವನ್ನಪ್ಪಿರುವ ಘಟನೆ ಚೆನ್ನೈ ನಲ್ಲಿ ನಡೆದಿದೆ.

ಸುರೇಶ್‌ (54) ಮೃತ ಸ್ಟಂಟ್‌ ಮ್ಯಾನ್‌ ಎಂದು ತಿಳಿದು ಬಂದಿದೆ. ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಅವರ ‘ವಿಡುತಲೈ’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ.

ರೈಲು ದುರಂತದ ಚಿತ್ರೀಕರಣವನ್ನು ಮಾಡಲಾಗುತ್ತಿತ್ತು. ಈ ವೇಳೆ ಸುರೇಶ್‌ ಹಾಗೂ ಇತರ ಸ್ಟಂಟ್‌ ಮ್ಯಾನ್‌ ಗಳನ್ನು ಹಗ್ಗದಲ್ಲಿ ಕ್ರೇನ್‌ ಗೆ ಕಟ್ಟಲಾಗಿತ್ತು. ಅನಿರೀಕ್ಷಿತವಾಗಿ ಕ್ರೇನ್‌ ನಿಂದ ಹಗ್ಗ ತುಂಡಾಗಿ ಸುರೇಶ್‌ ಅವರು ಬಿದ್ದಿದ್ದಾರೆ. ಸುಮಾರು 20 ಅಡಿ ಎತ್ತರದಿಂದ ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ವರದಿ ತಿಳಿಸಿದೆ.

ʼವಿಡುತಲೈʼ ಚಿತ್ರದಲ್ಲಿ ಸೂರಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ವಿಜಯ್‌ ಸೇತುಪತಿಯೂ ಬಣ್ಣ ಹಚ್ಚಿದ್ದಾರೆ. ಮತ್ತೊಬ್ಬ ಸಾಹಸ ಕಲಾವಿದ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ ಮತ್ತು ನಟ ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಬ್ಯಾನರ್​ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ತಮಿಳಿನ ಜನಪ್ರಿಯ ಹಾಸ್ಯ ನಟ ಸೂರಿ ನಾಯಕರಾಗಿ ನಟಿಸುತ್ತಿದ್ದಾರೆ. ಮತ್ತೊಬ್ಬ ಜನಪ್ರಿಯ ನಟ ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!