ತಿಮ್ಮನ ಮೊಟ್ಟೆಗಳು ಸಿನಿಮಾದ ಪೋಸ್ಟರ್ 
ಸಿನಿಮಾ ಸುದ್ದಿ

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ 'ತಿಮ್ಮನ ಮೊಟ್ಟೆಗಳು' ಸಿನಿಮಾ ಶೂಟಿಂಗ್ ಮುಕ್ತಾಯ

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾದ ಚಿತ್ರೀಕರಣ ಮುಗಿದಿದೆ. ಈ ಹಿಂದೆ ಹೊಂಬಣ್ಣ ಮತ್ತು ಎಂಥಾ ಕಥೆ ಮಾರಾಯ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕರು ಇದೀದ ತಿಮ್ಮನ ಮೊಟ್ಟೆಗಳು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾದ ಚಿತ್ರೀಕರಣ ಮುಗಿದಿದೆ. ಈ ಹಿಂದೆ ಹೊಂಬಣ್ಣ ಮತ್ತು ಎಂಥಾ ಕಥೆ ಮಾರಾಯ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕರು ಇದೀದ ತಿಮ್ಮನ ಮೊಟ್ಟೆಗಳು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

ತಿಮ್ಮನ ಮೊಟ್ಟೆಗಳು ಸಿನಿಮಾ ರಕ್ಷಿತ್ ತೀರ್ಥಹಳ್ಳಿ ಅವರ ಸ್ವರಚಿತ ಕಾಡಿನ ನೆಂಟರು ಕಾದಂಬರಿಯನ್ನು ಆಧರಿಸಿದ್ದು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಬೆಟ್ಟಗುಡ್ಡಗಳಲ್ಲಿ ವಾಸಿಸುವ ಜನರ ಜೀವನಶೈಲಿ, ಸ್ವಭಾವ, ಮಾನವೀಯ ಮೌಲ್ಯಗಳನ್ನು ಚಿತ್ರ ಒಳಗೊಂಡಿದೆ.

ತಿಮ್ಮನ ಮೊಟ್ಟೆಗಳು ಸಿನಿಮಾವನ್ನು ಶಿವಮೊಗ್ಗ ಮೂಲದ ಅಮೆರಿಕ ನಿವಾಸಿ ಆದರ್ಶ ಅಯ್ಯಂಗಾರ್ ಅವರು ಶ್ರೀ ಕೃಷ್ಣ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ತಿಮ್ಮನ ಮೊಟ್ಟೆಗಳು ತಾರಾಬಳಗದಲ್ಲಿ ಶೃಂಗೇರಿಯ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಕರ್, ಪ್ರಗತಿ, ವಿನಯ್ ಕಣಿವೆ ಮತ್ತು ಮಾಸ್ಟರ್ ಶ್ರೀಹರ್ಷಾ ಮುಂತಾದವರು ನಟಿಸಿದ್ದಾರೆ.

ಪ್ರವೀಣ್ ಎಸ್ ಅವರ ಛಾಯಾಗ್ರಹಣ ಹಾಗೂ ಹೇಮಂತ್ ಜೋಯಿಸ್ ಅವರ ಸಂಗೀತ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5–6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

SCROLL FOR NEXT