ಕೃಷ್ಣ ರಾವ್‌ 
ಸಿನಿಮಾ ಸುದ್ದಿ

ಹಿರಿಯ ನಟ, ‘ಕೆಜಿಎಫ್’ ಖ್ಯಾತಿಯ ತಾತ ಕೃಷ್ಣ ರಾವ್‌ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆಜಿಎಫ್​ ಸಿನಿಮಾ ಖ್ಯಾತಿಯ ತಾತ ಕೃಷ್ಣ ರಾವ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆಜಿಎಫ್​ ಸಿನಿಮಾ ಖ್ಯಾತಿಯ ತಾತ ಕೃಷ್ಣ ರಾವ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಯಲ್ಲಿ ಕೃಷ್ಣ ರಾವ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. 

ನಾಳೆ ಬೆಳಗ್ಗೆ 11:00 ಘಂಟೆಗೆ ಸೀತಾ ಸರ್ಕಲ್​ನಲ್ಲಿರುವ ಕೃಷ್ಣ ಅವರ ಅಣ್ಣನ ಮನೆ ಬಳಿಯ ಸ್ಮಶಾನದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

ಕೃಷ್ಣ ರಾಮ್​ ಅವರು ನಟ ಶಂಕರ್​ ನಾಗ್​ ಕಾಲದಿಂದಲೂ ಕನ್ನಡ ಚಿತ್ರರಂಗದಲ್ಲಿದ್ದರು. ಆದರೆ ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ  'ಕೆಜಿಎಫ್' ಹಾಗೂ 'ಕೆಜಿಎಫ್ 2' ಸಿನಿಮಾಗಳಲ್ಲಿ ನಟಿಸಿದ ನಂತರ ಕೃಷ್ಣ ರಾವ್ ಅವರು ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದರು.

ಕೆಜಿಎಫ್ 2 ಚಿತ್ರದಲ್ಲಿನ ಅವರ ಡೈಲಾಗ್​ಗೆ ಫ್ಯಾನ್ಸ್​ ಫಿದಾ ಆಗಿದ್ದರು. ಚಿತ್ರದಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಳ್ಳದಿದ್ದರು ಅವರ ಪಾತ್ರ ಮತ್ತು ಡೈಲಾಗ್​ನಿಂದ ಫ್ಯಾನ್ಸ್​ಗಳಿಗೆ ಇಷ್ಟವಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!