ರಾಮ್ ಚರಣ್-ಉಪಾಸನಾ 
ಸಿನಿಮಾ ಸುದ್ದಿ

10 ವರ್ಷಗಳ ಕಾಯುವಿಕೆ ಅಂತ್ಯ: ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಮ್ ಚರಣ್-ಉಪಾಸನಾ ದಂಪತಿ!

ನಟ ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಪ್ರಸಿದ್ಧ ಜೋಡಿಗಳಲ್ಲಿ ಒಬ್ಬರಾಗಿದ್ದಾರೆ. ರಾಮ್ ಚರಣ್-ಉಪಾಸನಾ ಮದುವೆಯಾಗಿ 10 ವರ್ಷಗಳು ಕಳೆದಿತ್ತು. ಇದೀಗ ತಮ್ಮ ಅಭಿಮಾನಿಗಳಿಗೆ ನಟ ಗುಡ್ ನ್ಯೂಸ್ ನೀಡಿದ್ದಾರೆ.

ನಟ ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಪ್ರಸಿದ್ಧ ಜೋಡಿಗಳಲ್ಲಿ ಒಬ್ಬರಾಗಿದ್ದಾರೆ. ರಾಮ್ ಚರಣ್-ಉಪಾಸನಾ ಮದುವೆಯಾಗಿ 10 ವರ್ಷಗಳು ಕಳೆದಿತ್ತು. ಇದೀಗ ತಮ್ಮ ಅಭಿಮಾನಿಗಳಿಗೆ ನಟ ಗುಡ್ ನ್ಯೂಸ್ ನೀಡಿದ್ದಾರೆ.

ಈ ಬಗ್ಗೆ ಕೊನಿಡೇಲ ಕುಟುಂಬ ಅಧಿಕೃತ ಘೋಷಣೆ ಮಾಡಿದೆ. 2023 ರಾಮ್ ಚರಣ್ ಮತ್ತು ಇಡೀ ಕೊನಿಡೆಲಾ ಕುಟುಂಬಕ್ಕೆ ಖಂಡಿತವಾಗಿಯೂ ವಿಶೇಷವಾಗಲಿದೆ.

ಡಿಸೆಂಬರ್ 12ರಂದು ಚಿರಂಜೀವಿ ಮತ್ತು ಅನಿಲ್ ಕಾಮಿನೆನಿ ಸುದ್ದಿಯನ್ನು ದೃಢಪಡಿಸಿದ್ದಾರೆ. 'ಶ್ರೀ ಹನುಮಾನ್ ಜೀ ಅವರ ಆಶೀರ್ವಾದದೊಂದಿಗೆ, ಉಪಾಸನಾ ಮತ್ತು ರಾಮ್ ಚರಣ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿಸಲು ನಾವು ಸಂತೋಷಪಡುತ್ತೇವೆ. ಪ್ರೀತಿ ಮತ್ತು ಕೃತಜ್ಞತೆಗಳೊಂದಿಗೆ ಸುರೇಖಾ ಮತ್ತು ಚಿರಂಜೀವಿ ಕೊನಿಡೇಲಿ, ಶೋಭನಾ ಮತ್ತು ಅನಿಲ್ ಕಾಮಿನೇನಿ ಎಂದು ಬರೆದಿದ್ದಾರೆ.

ಜುಲೈನಲ್ಲಿ ರಾಮ್ ಚರಣ್ ಮತ್ತು ಉಪಾಸನಾ ತಮ್ಮ 10ನೇ ವಿವಾಹ ವಾರ್ಷಿಕೋತ್ಸವವನ್ನು ಇಟಲಿಯಲ್ಲಿ ಆಚರಿಸಿದರು. ರಾಮಚರಣ್ ಮತ್ತು ಉಪಾಸನಾ ಕಾಲೇಜಿನಲ್ಲಿ ಪರಸ್ಪರ ಭೇಟಿಯಾಗಿದ್ದರು. ಒಂದು ವರ್ಷದ ಡೇಟಿಂಗ್ ನಂತರ 14 ಜೂನ್ 2012ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 

ಆರ್ ಆರ್ ಆರ್ ಬ್ಲಾಕ್ ಬಸ್ಟರ್ ಹಿಟ್ ನಂತರ ರಾಮ್ ಚರಣ್ RC15 ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಂಕರ್ ಅವರ ಸಿನಿಮಾದಲ್ಲಿ ರಾಮ್ ಚರಣ್ ಜೊತೆಗೆ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ಮೂಲಕ ಟಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಉಪ್ಪೇನ ನಿರ್ದೇಶಕ ಬುಚ್ಚಿ ಬಾಬು ಸನಾ ಅವರೊಂದಿಗೆ ಸಹ ರಾಮ್ ಚರಣ್ ಕೈಜೋಡಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT