ಹಳೆಯ ಫೋಟೋದಲ್ಲಿ ಶಿವಣ್ಣ, ರಜನಿಕಾಂತ್ 
ಸಿನಿಮಾ ಸುದ್ದಿ

ಸೂಪರ್ ಸ್ಟಾರ್ ರಜನಿಕಾಂತ್ ಗೆ 72ನೇ ಹುಟ್ಟುಹಬ್ಬದ ಸಂಭ್ರಮ; ಶುಭಾಶಯಗಳ ಮಹಾಪೂರ

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಹಿರಿಯ ನಟರಾದ ಕಮಲ್ ಹಾಸನ್, ಡಾ. ಶಿವರಾಜ್ ಕುಮಾರ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.  

ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಹಿರಿಯ ನಟರಾದ ಕಮಲ್ ಹಾಸನ್, ಡಾ. ಶಿವರಾಜ್ ಕುಮಾರ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.  

ಸಾಮಾಜಿಕ ಜಾಲತಾಣ ಟ್ವೀಟರ್ ಮೂಲಕ ಡಾ. ಶಿವರಾಜ್ ಕುಮಾರ್ ಶುಭಾಶಯ ಕೋರಿದ್ದಾರೆ. ಶಿವಣ್ಣ ಹಾಗೂ ರಜನಿಕಾಂತ್ ಪರಸ್ಪರ ಸಿಹಿ ತಿನ್ನಿಸುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದು, ನನಗೆ ಸ್ಫೂರ್ತಿಯಾದ ಅದ್ಭುತ ವ್ಯಕ್ತಿತ್ವ ಎಂದು ಬರೆದುಕೊಂಡಿದ್ದಾರೆ.

ನಿಮ್ಮ ಯಶಸ್ಸಿನ ಪ್ರಯಾಣವನ್ನು ಮುಂದುವರಿಸಿ ಎಂದು ತಮಿಳಿನ ಮತ್ತೋರ್ವ ಖ್ಯಾತ ನಟ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ. ರಜನಿ ಕಾಂತ್ ಅವರ ಮಾಜಿ ಅಳಿಯ ಧನುಶ್ ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. 

ರಜನಿಕಾಂತ್ 1950 ಡಿಸೆಂಬರ್ 12 ರಂದು ಶಿವಾಜಿ ರಾವ್ ಗಾಯಕ್ವಾಡ್ ಅವರ ಪುತ್ರನಾಗಿ ಬೆಂಗಳೂರಿನಲ್ಲಿ ಜನಿಸಿದರು. 1975ರಲ್ಲಿ ತಮಿಳು ಅಪೂರ್ವ ರಾಗಂಗಳ್ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ವಿಭಿನ್ನ ಪಾತ್ರಗಳ ಮೂಲಕ ಜನಪ್ರಿಯರಾಗಿದ್ದು, ದಾದಾ ಸಾಹೇಬ್ ಪಾಲ್ಕೆ, ಪದ್ಮ ವಿಭೂಷಣ, ಪದ್ಮ ಭೂಷಣ, ಎನ್ ಟಿಆರ್ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ- ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!