ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

'ಮಾಡಬೇಕೆಂದೇ ಮಾಡುತ್ತಿರುವ ವಿವಾದವಿದು’: ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಬಟ್ಟೆಯ ಬಣ್ಣದ ಕಾರಣಕ್ಕೆ ವ್ಯಕ್ತಿಸುತ್ತಿರುವ ವಿರೋಧವು ಬಹಳ ಕ್ಷುಲ್ಲಕವಾಗಿದೆ. ಬುದ್ಧ ಮತ್ತು ಬಸವನವರ ಬಣ್ಣವಾದ ಕೇಸರಿಯನ್ನು ಹಿಂದುತ್ವವು ತನ್ನದಾಗಿಸಿಕೊಳ್ಳುತ್ತಿದೆ.

ಚೇತನ್ ಕುಮಾರ್
Shilpa D
Updated On : 16 Dec 2022, 10:42 am

ಬೆಂಗಳೂರು: ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಹಾಡೊಂದರಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ನಾಲ್ಕೈದು ದಿನಗಳಿಂದ ಸಾಕಷ್ಟು ಚರ್ಚೆ ಆಗುತ್ತಿದೆ. ನಟಿ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ಹಿಂದೂ ಕಾರ್ಯಕರ್ತರು ದೀಪಿಕಾ ಮೇಲೆ ಮುಗಿಬಿದ್ದಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ ಚೇತನ್, ‘ಪಠಾಣ್ ಚಿತ್ರದ ಹಾಡು ಈಗ ಅದರ ಕೇಸರಿ ಬಿಕಿನಿ ಮತ್ತು ಹಸಿರು ಶರ್ಟ್ ಕಾರಣದಿಂದ ರಾಜಕೀಯಗೊಳ್ಳುತ್ತಿದೆ. ಬಟ್ಟೆಯ ಬಣ್ಣದ ಕಾರಣಕ್ಕೆ ವ್ಯಕ್ತಿಸುತ್ತಿರುವ ವಿರೋಧವು ಬಹಳ ಕ್ಷುಲ್ಲಕವಾಗಿದೆ. ಬುದ್ಧ ಮತ್ತು ಬಸವನವರ ಬಣ್ಣವಾದ ಕೇಸರಿಯನ್ನು  ಹಿಂದುತ್ವವು ತನ್ನದಾಗಿಸಿಕೊಳ್ಳುತ್ತಿದೆ. ಪ್ರಕೃತಿ ಮತ್ತು ರೈತರ ಸಂಕೇತವಾದ ಹಸಿರು ಬಣ್ಣವು ಇಸ್ಲಾಮೀಕರಣಗೊಳ್ಳುತ್ತಿದೆ. ಮಾಡಬೇಕೆಂದೇ ಮಾಡುತ್ತಿರುವ ವಿವಾದವಿದು’ ಎಂದು ಅವರು ಬರೆದುಕೊಂಡಿದ್ದಾರೆ.

ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments