ನವೀನ್ ಶಂಕರ್ 
ಸಿನಿಮಾ ಸುದ್ದಿ

'ಗುಲ್ಟೂ' ಶಂಕರ್ ಮುಂದಿನ ಸಿನಿಮಾ 'ಮೂಲತಃ ನಮ್ಮವರೇ'!

ಚೊಚ್ಚಲ ಸಿನಿಮಾ ಗುಲ್ಟೂ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಮೂಲತಃ ನಮ್ಮವರೇ ಎಂಬ ಟೈಟಲ್ ನ ಚಿತ್ರೀಕರಣ ಮುಗಿಸಿದ್ದಾರೆ.

ಚೊಚ್ಚಲ ಸಿನಿಮಾ ಗುಲ್ಟೂ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಮೂಲತಃ ನಮ್ಮವರೇ ಎಂಬ ಟೈಟಲ್ ನ ಚಿತ್ರೀಕರಣ ಮುಗಿಸಿದ್ದಾರೆ.

ರಂಗಭೂಮಿ ನಂಟಿರುವ ಚೇತನ್ ಭಾಸ್ಕರಯ್ಯ  'ಮೂಲತಃ ನಮ್ಮವರೇ' ಸಿನಿಮಾದ ಮೂಲಕ ನಿರ್ದೇಶಕರಾಗಿದ್ದಾರೆ. 'ನನಗೆ ಸಿನಿಮಾ ನಿರ್ದೇಶನದಲ್ಲಿ ತುಂಬ ಆಸಕ್ತಿ ಇತ್ತು. ಈ ಹಿಂದೆ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ‌‌. ಹಿರಿತೆರೆಯಲ್ಲಿ ಇದು ನನಗೆ ಮೊದಲ ಚಿತ್ರ.

'ಮೂಲತ: ನಮ್ಮವರೇ' ಇದೊಂದು ಕೌಟುಂಬಿಕ ಚಿತ್ರ. ಅಪ್ಪ- ಮಗನ ಬಾಂಧವ್ಯದ ಸನ್ನಿವೇಶಗಳೇ ಈ ಚಿತ್ರದ ಹೈಲೆಟ್ . ಬೆಂಗಳೂರು ಹಾಗೂ ಕರಾವಳಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ‌. ನವೀನ್ ಶಂಕರ್ ಬಿಟ್ಟರೆ ಬಹುತೇಕರಿಗೆ ಇದು ಮೊದಲ ಸಿನಿಮಾ' ಎಂದರು ನಿರ್ದೇಶಕ ಚೇತನ್ ಭಾಸ್ಕರಯ್ಯ.

ಅಂದಹಾಗೆ, ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಮುಂಬೈನ ತಾನ್ಯಾ ಈ ಚಿತ್ರದ ನಾಯಕಿ. ಅವಿನಾಶ್, ಮಾಳವಿಕಾ ಅವಿನಾಶ್, ತೆಲುಗಿನ ಸತ್ಯಪ್ರಕಾಶ್, ಕಾವ್ಯಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

'ಮೂಲತಹ ನಮ್ಮವರೇ' ಮ್ಯೂಸಿಕ್ ಬ್ಯಾಂಡ್ ಏಕ್ ಕ್ಯಾಬ್ ಸಂಗೀತ ನೀಡಲಿದ್ದು, ಜುವೀನ್ ಸಿಂಗ್ ಹಿನ್ನೆಲೆ ಸಂಗೀತದ ಹೊಣೆ ಹೊತ್ತಿದ್ದಾರೆ. ಚಿತ್ರಕ್ಕೆ ಚಂತು ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT