ದರ್ಶನ್, ರಮ್ಯಾ ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ಸೋಶಿಯಲ್ ಮೀಡಿಯಾದಲ್ಲಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯ ಮಾತು ವಿಷಾದನೀಯ-ನಟಿ ರಮ್ಯಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲಿನ ಚಪ್ಪಲಿ ಎಸೆತ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ಅಭಿಮಾನಿ ಸಂಘಗಳು,  ಅಭಿಮಾನಿ ಬಳಗಗಳ ನಡವಳಿಕೆ ಚಿಂತಾಜನಕ ಎಂದಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲಿನ ಚಪ್ಪಲಿ ಎಸೆತ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳ ನಡವಳಿಕೆ ಚಿಂತಾಜನಕ ಎಂದಿದ್ದಾರೆ.

ಅಭಿಮಾನಿಗಳ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ನಿಜ ರೂಪ, ಹೆಸರನ್ನು ಹಾಕಿಕೊಳ್ಳದೆ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತನಾಡುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಧೀರ್ಘ ಟ್ವೀಟ್ ಮಾಡಿರುವ ರಮ್ಯಾ, ನಾನು ಯಾವತ್ತಿಗೂ ನಂಬರ್ 1 ಅನ್ನುವ ಅಹಂ ಬಿಟ್ಟು, ಯಾರೇ ಮೇಲೆ ಬಂದರೂ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಅಧಿಕಾರ, ಹಣ ಯಾವತ್ತೂ ಶಾಶ್ವತ ಅಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು,ತಾಯಿ, ಹೆಂಡತಿ, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತಹ ಕೆಟ್ಟ ಮಾತುಗಳನ್ನಾಡುವುದನ್ನು ನೋಡಿ ನೋವಾಗುತ್ತದೆ ಎಂದಿದ್ದಾರೆ. 

 ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ,ತಮ್ಮ ಅಭಿಮಾನಿಗಳಿಗೆ ತಿಳುವಳಿಕೆ ಹೇಳಿ ಅವರನ್ನು ಸುಸಂಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಾಗಿದೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel