ನಾನು ಅದು ಮತ್ತು ಸರೋಜಾ ಸಿನಿಮಾ ಸ್ಚಿಲ್ 
ಸಿನಿಮಾ ಸುದ್ದಿ

ಲೂಸ್ ಮಾದ ಯೋಗಿ ನಟನೆಯ 'ನಾನು ಅದು ಮತ್ತು ಸರೋಜ' ರಿಲೀಸ್ ಡೇಟ್ ಫಿಕ್ಸ್

ನಟ 'ಲೂಸ್ ಮಾದ' ಯೋಗಿ ಈಚೆಗಷ್ಟೇ 'ಹೆಡ್ ಬುಷ್' ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದರು. ಇದೀಗ ಅವರು ಮತ್ತೊಂದು ಡಿಫರೆಂಟ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ಶೀರ್ಷಿಕೆಯಿದಲೇ ಈ ಸಿನಿಮಾ ಗಮನಸೆಳೆಯುತ್ತಿದೆ.

ನಟ 'ಲೂಸ್ ಮಾದ' ಯೋಗಿ ಈಚೆಗಷ್ಟೇ 'ಹೆಡ್ ಬುಷ್' ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದರು. ಇದೀಗ ಅವರು ಮತ್ತೊಂದು ಡಿಫರೆಂಟ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ಶೀರ್ಷಿಕೆಯಿದಲೇ ಈ ಸಿನಿಮಾ ಗಮನಸೆಳೆಯುತ್ತಿದೆ.

'ನಾನು, ಅದು ಮತ್ತು ಸರೋಜ' ಎಂದು ಟೈಟಲ್ ಇಡಲಾಗಿದೆ. ಕಂಟೆಂಟ್ ಒರಿಯಂಟೆಡ್ ಸಿನಿಮಾವಾಗಿದ್ದು, ಸದ್ಯ ಟ್ರೇಲರ್ ಲಾಂಚ್ ಮಾಡಲಾಗಿದ್ದು, ಇದೇ ಡಿ.30ಕ್ಕೆ ಈ ಸಿನಿಮಾ ತೆರೆಗೆ ಬರುತ್ತಿದೆ.

ಈ ಹಿಂದೆ 'ಮಡಮಕ್ಕಿ' ಸಿನಿಮಾವನ್ನು ನಿರ್ದೇಶನ ಮಾಡಿದ್ದ ವಿನಯ್ ಪ್ರೀತಮ್ ಈಗ ನಾನು, ಅದು ಮತ್ತು ಸರೋಜ' ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. 'ನಾನು ಈ ಹಿಂದೆ 'ಮಡಮಕ್ಕಿ' ಚಿತ್ರವನ್ನು ನಿರ್ದೇಶಿಸಿದ್ದೆ‌. ಇದು ನನ್ನ ಎರಡನೇ ಚಿತ್ರ. 'ನಾನು, ಅದು ಮತ್ತು ಸರೋಜ' ಚಿತ್ರದ ಕಥೆ ಮೂರು ಪ್ರಮುಖ ಪಾತ್ರಗಳ ಸುತ್ತ ಸಾಗುತ್ತದೆ. ಲೂಸ್ ಮಾದ ಯೋಗಿ, ಹಿರಿಯ ನಟ ದತ್ತಣ್ಣ ಹಾಗೂ ಅಪೂರ್ವ ಭಾರದ್ವಾಜ್ ಆ ಮೂರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡ 'ಲೂಸ್ ಮಾದ' ಯೋಗಿ, 'ನನಗೆ ಈ ಸಿನಿಮಾದ ಕಥೆಯನ್ನು ನಿರ್ದೇಶಕ ವಿನಯ್ ಹೇಳಿದಾಗ ತುಂಬಾ ಇಷ್ಟವಾಯಿತು. ತಮಿಳಿನಲ್ಲಿ ನಟ ವಿಜಯ್ ಸೇತುಪತಿ ಅವರ ಸಿನಿಮಾವೊಂದನ್ನು ನೋಡಿದ್ದೆ. ಆಗಿನಿಂದ ನನಗೂ ಆ ರೀತಿಯ ಪಾತ್ರ ಮಾಡಬೇಕೆಂಬ ಆಸೆ ಇತ್ತು. ನಾನು ಒಂದೇ ತರಹದ ಸಿನಿಮಾ ಮಾಡುವುದಕ್ಕಿಂತ ವಿಭಿನ್ನ ಕಥೆಯ ಸಿನಿಮಾಗಳಲ್ಲಿ ನಟಿಸಲು ಇಷ್ಟಪಡುತ್ತೇನೆ ಎಂದಿದ್ದಾರೆ ಯೋಗಿ.

ಲೂಸ್ ಮಾದ ಯೋಗಿ, ಹಿರಿಯ ನಟ ದತ್ತಣ್ಣ, ಅಪೂರ್ವ ಭಾರದ್ವಾಜ್ ಜೊತೆಗೆ ಸಂದೀಪ್, ಕುರಿ ಬಾಂಡ್ ರಂಗ, ಪ್ರವೀಣ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾಗೆ ಪ್ರಸಾದ್ ಶೆಟ್ಟಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಪೂಜಾ ವಸಂತಕುಮಾರ್ ಬಂಡವಾಳ ಹೂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT