ಯುವರಾಜ್ ಕುಮಾರ್ 
ಸಿನಿಮಾ ಸುದ್ದಿ

ನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೇ, ಅವರ ಧ್ವನಿ ನಮ್ಮೆಲ್ಲರ ಶಕ್ತಿ’, ಗೌರವ ಯಾವಾಗಲೂ ಪರಸ್ಪರ ಅಲ್ವಾ?: ಮೌನ ಮುರಿದ ಯುವ ರಾಜ್‌ಕುಮಾರ್‌

‘ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು. ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ? ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನು ಗೌರವಿಸುವುದು, ಎಲ್ಲರನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ

ಬೆಂಗಳೂರು: ಹೊಸಪೇಟೆಯಲ್ಲಿ ಕೆಲ ದಿನಗಳ ಹಿಂದೆ ನಟ ದರ್ಶನ್‌ ಅವರ ಮೇಲೆ ಚಪ್ಪಲಿ ಎಸೆದ ಕೃತ್ಯವನ್ನು ಖಂಡಿಸಿ ಚಂದನವನದ ಹಲವು ಕಲಾವಿದರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದರು.

ಇದರ ಬೆನ್ನಲ್ಲೇ ಕೆಲ ಸ್ಟಾರ್‌ ನಟರ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪ, ಪ್ರತ್ಯಾರೋಪಗಳು, ನಿಂದನೆಯ ಪೋಸ್ಟ್‌ಗಳನ್ನು ಅಪ್‌ಲೋಡ್‌ ಮಾಡುತ್ತಿರುವುದು ಪ್ರತಿನಿತ್ಯವೂ ಹೆಚ್ಚುತ್ತಿವೆ. ಇಂತಹ ಪೋಸ್ಟ್‌ಗಳ ಕುರಿತು ನಟರಾದ ಯುವ ರಾಜ್‌ಕುಮಾರ್ ಬೇಸರವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಯುವ ರಾಜ್‌ಕುಮಾರ್‌, ‘ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು. ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ? ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನು ಗೌರವಿಸುವುದು, ಎಲ್ಲರನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ. ಅವರ ವ್ಯಕ್ತಿತ್ವ ಎಂದೆಂದಿಗೂ ಎಲ್ಲರಿಗೂ ಮಾದರಿಯಾಗಿ ಇರುತ್ತದೆ. ಅವರ ಬಗ್ಗೆ ಅಗೌರವದಿಂದ ಅವಹೇಳನಕಾರಿಯಾಗಿ ಮಾತನಾಡಿ ಅವರ ಅಭಿಮಾನಿಗಳನ್ನು ಕೆಣಕಿದರೆ, ಅವರ ಭಾವನೆಗಳನ್ನು ನೋಯಿಸಿದರೆ, ಅಭಿಮಾನಿಗಳು ನಿರ್ದಿಷ್ಟ ರೀತಿಯಲ್ಲಿ ಪ್ರತಿಕ್ರಿಯಿಸುವುದು ‘ಬಹಿರಂಗವಾಗಿಯೇ’ ವಿನಃ ನಡೆಯುವ ಪ್ರತಿಯೊಂದು ಘಟನೆಗೂ ಅವರೇ ಕಾರಣಕರ್ತರು ಆಗೋದಿಲ್ಲ. ನಡೆದಿರುವ ಕೃತ್ಯ ಖಂಡನೀಯ. ಯಾರೋ ಮಾಡಿದ ತಪ್ಪನ್ನು ಮತ್ತೊಬ್ಬರ ಮೇಲೆ ಹಾಕುವುದರಿಂದ ಸುಳ್ಳು ಸತ್ಯವಾಗುವುದಿಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ, ತಪ್ಪಿತಸ್ಥ ಯಾರೇ ಆಗಿದ್ದರೂ ಶಿಕ್ಷೆ ಖಂಡಿತ ಆಗುತ್ತದೆ. ಕಾಣದ ಕೈಗಳು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೂ, ಕಾಣುವ ಬುದ್ಧಿ ನಮ್ಮದಾಗಿರಲಿ. ನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೇ, ಅವರ ಧ್ವನಿ ನಮ್ಮೆಲ್ಲರ ಶಕ್ತಿ’ ಎಂದಿದ್ದಾರೆ.

ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಅಭಿಮಾನಿ ಬಳಗದ ಮೇಲೆ ಆರೋಪ ಹೊರಿಸುವ ಕೆಲಸ ಆಗುತ್ತಿದೆ. ನಿಜವಾಗಿಯೂ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿಟ್ಟು ನೋಡುವುದು ಸರಿಯಲ್ಲ ಎಂಬ ಅನಿಸಿಕೆ ಹಲವರಿಂದ ಕೇಳಿಬರುತ್ತಿದೆ. ಡಾ. ರಾಜ್​ಕುಮಾರ್​ ಕುಟುಂಬದ ಇಡೀ ಅಭಿಮಾನಿ ಬಳಗವನ್ನೇ ಕೆಲವರು ನಿಂದಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಯುವ ರಾಜ್​ಕುಮಾರ್​ ಮೌನ ಮುರಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT