ಚಲಪತಿ ರಾವ್ 
ಸಿನಿಮಾ ಸುದ್ದಿ

ಟಾಲಿವುಡ್ ಹಿರಿಯ ನಟ ಚಲಪತಿ ರಾವ್ ವಿಧಿವಶ

ತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ (78) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ,

ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ (78) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ,

ಹೃದಯಾಘಾತದಿಂದ ಬಂಜಾರ ಹಿಲ್ಸ್, ಎಂಎಲ್ಎ ಕಾಲೋನಿಯಲ್ಲಿರುವ ತಮ್ಮ ಪುತ್ರ ರವಿಬಾಬು ಅವರ ನಿವಾಸದಲ್ಲಿ ಚಲಪತಿ ರಾವ್ ಅವರು ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ಚಲಪತಿ ರಾವ್ ಅವರ ಮಗ ರವಿಬಾಬು ಕೂಡ ತೆಲುಗು ಚಿತ್ರರಂಗದಲ್ಲಿ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದಾರೆ.

ಪೋಷಕ ನಟ ಮತ್ತು ಖಳನಟ ಪಾತ್ರಗಳಿಗೆ ಹೆಸರಾದ ಚಲಪತಿ ರಾವ್ ಅವರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.

ತೆಲುಗು ಸ್ಟಾರ್‌ ನಟರಾದ ಎನ್‌ಟಿ ರಾಮರಾವ್, ಕೃಷ್ಣ, ಚಿರಂಜೀವಿ, ನಂದಮುರಿ ಬಾಲಕೃಷ್ಣ, ಪವನ್ ಕಲ್ಯಾಣ್, ವೆಂಕಟೇಶ್, ಅಕ್ಕಿನೇನಿ ನಾಗಾರ್ಜುನ, ಜ್ಯೂ. ಎನ್‌ಟಿಆರ್‌, ಮಹೇಶ್‌ ಬಾಬು ಅಭಿನಯಿಸಿದ್ದ ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ  ಚಲಪತಿ ರಾವ್ ಕಾಣಿಸಿಕೊಂಡಿದ್ದರು.

ಚಲಪತಿ ರಾವ್ ಅವರ ನಿಧನಕ್ಕೆ ರಾಜಕೀಯ ಮುಖಂಡರು ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT