ವುಲ್ಫ್' ಸಿನಿಮಾ ಶೂಟಿಂಗ್ ಮುಕ್ತಾಯ 
ಸಿನಿಮಾ ಸುದ್ದಿ

ಪ್ರಭುದೇವ ನಟನೆಯ 'ವುಲ್ಫ್' ಸಿನಿಮಾ ಶೂಟಿಂಗ್ ಮುಕ್ತಾಯ

ಕೆಲವು ತಿಂಗಳುಗಳ ಹಿಂದೆಯೇ ಪ್ರಭುದೇವ ಅಭಿನಯದ ಪ್ಯಾನ್​ ಇಂಡಿಯಾ ಚಿತ್ರವೊಂದನ್ನು ತಮ್ಮ ಸಂದೇಶ್​ ಪ್ರೊಡಕ್ಷನ್ಸ್​ ಮೂಲಕ ಶುರು ಮಾಡಿದ್ದರು ಹಿರಿಯ ನಿರ್ಮಾಪಕ ಸಂದೇಶ್​ ನಾಗರಾಜ್​. ಈ ಚಿತ್ರಕ್ಕೆ ‘ವುಲ್ಫ್​’  ಎಂಬ ಹೆಸರನ್ನು ಇಡಲಾಗಿತ್ತು. 

ಕೆಲವು ತಿಂಗಳುಗಳ ಹಿಂದೆಯೇ ಪ್ರಭುದೇವ ಅಭಿನಯದ ಪ್ಯಾನ್​ ಇಂಡಿಯಾ ಚಿತ್ರವೊಂದನ್ನು ತಮ್ಮ ಸಂದೇಶ್​ ಪ್ರೊಡಕ್ಷನ್ಸ್​ ಮೂಲಕ ಶುರು ಮಾಡಿದ್ದರು ಹಿರಿಯ ನಿರ್ಮಾಪಕ ಸಂದೇಶ್​ ನಾಗರಾಜ್​. ಈ ಚಿತ್ರಕ್ಕೆ ‘ವುಲ್ಫ್​’  ಎಂಬ ಹೆಸರನ್ನು ಇಡಲಾಗಿತ್ತು.  ಇದೀಗ ಈ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ.

ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ ಭಾರದ್ವಾಜ್​ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ಮಾಡಲಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ‘ಚಿತ್ರವು ಮುಂದಿನ ವರ್ಷ ತೆರೆಗೆ ಬರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT