ವಿಕ್ರಾಂತ್ ರೋಣ ಸ್ಟಿಲ್ 
ಸಿನಿಮಾ ಸುದ್ದಿ

ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ವಿದೇಶದಲ್ಲಿಯೇ 1,200 ಸ್ಕ್ರೀನ್ ಗಳ ಗುರಿ!

ಕಿಚ್ಚ ಸುದೀಪ್ ಅಭಿನಯದ  ವಿಕ್ರಾಂತ್ ರೋಣ 3 ಡಿಯಲ್ಲಿ ಜುಲೈ 28 ರಂದು ಬಿಡುಗಡೆಗೆ ಸಜ್ಜಾಗಿದೆ. ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ಕುತೂಹಲ ಮೂಡಿಸಿದೆ.

ಕಿಚ್ಚ ಸುದೀಪ್ ಅಭಿನಯದ  ವಿಕ್ರಾಂತ್ ರೋಣ 3 ಡಿಯಲ್ಲಿ ಜುಲೈ 28 ರಂದು ಬಿಡುಗಡೆಗೆ ಸಜ್ಜಾಗಿದೆ. ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ಕುತೂಹಲ ಮೂಡಿಸಿದೆ. ಅನೂಪ್ ಭಂಡಾರಿ ನಿರ್ದೇಶನದ ಬಹು ಭಾಷೆಯ ಸಿನಿಮಾ, ದೇಶದಲ್ಲಿ ಹೆಚ್ಚಿನ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರಗಳಲ್ಲಿ ಒಂದಾಗಿದೆ. ಅದೇ ರೀತಿಯಲ್ಲಿ ವಿದೇಶದಲ್ಲೂ ಹೆಚ್ಚಿನ ಸ್ಕ್ರೀನ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಶಾಲಿನಿ ಆರ್ಟ್ಸ್ ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್ ಪಾಂಡಿಯನ್ ಸಹ- ನಿರ್ಮಾಪಕರಾಗಿದ್ದಾರೆ. ಈ ಮಧ್ಯೆ, ಒನ್ ಟ್ವೆಂಟ್ -8 ಮೀಡಿಯಾ ಆಪರೇಷನ್ ಹೆಡ್ ಯೋಗಿಶ್ ದ್ವಾರಕೇಶ್, ಆಕಾಶ್ ಅಮೇಯ ಜೈನ್ ಮತ್ತು ಫಣೀಂದ್ರ ಕುಮಾರ್ ಜೊತೆಗೆ ಕಾಸ್ಮಾಸ್ ಎಂಟರ್ ಟೈನ್ ಮೆಂಟ್ ಚಿತ್ರದ  ಓವರ್ ಸೀಸ್ ಮಾರ್ಕೆಟ್ ನೋಡಿಕೊಳ್ಳಲಿದೆ. ವಿದೇಶದಲ್ಲಿ 30ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ, ಸುಮಾರು 1,200 ಸ್ಕ್ರೀನ್ ಗಳಲ್ಲಿ  ವಿಕ್ರಾಂತ್ ರೋಣ ಬಿಡುಗಡೆಗೆ ಪ್ಲಾನ್ ಮಾಡಲಾಗಿದೆ ಎಂದು ಯೋಗಿ  ಸಿನಿ ಎಕ್ಸ್ ಪ್ರೆಸ್ ಗೆ ತಿಳಿಸಿದರು. 

ವಿದೇಶದಲ್ಲಿ ವಿಕ್ರಾಂತ್ ರೋಣ ಬಿಡುಗಡೆ ಮಾಡಲು ಕಳೆದ ಮೂರು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದೇವೆ. ಯುಕೆ, ಯುಎಸ್, ಕೆನಡಾ, ಯುರೋಪ್, ಗಲ್ಫ್ ರಾಷ್ಟ್ರಗಳು, ಆಸ್ಟ್ರೇಲಿಯಾ, ಮಲೇಷಿಯಾ, ಸಿಂಗಾಪುರ, ನೇಪಾಳ ಸೇರಿದಂತೆ ಮತ್ತಿತರ ರಾಷ್ಟ್ರಗಳ ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆ ಈಗಾಗಲೇ ಖಚಿತವಾಗಿದೆ. ಸೆನ್ಸಾರ್ ಬೋರ್ಡ್ ನಿಂದ ಅನುಮತಿ  ಸಿಕ್ಕ ನಂತರ ಚಿತ್ರ ಬಿಡುಗಡೆಯಾಗಲಿರುವ ರಾಷ್ಟ್ರಗಳು ಹಾಗೂ ಥಿಯೇಟರ್ ಗಳ ಬಗ್ಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

ಆಕಾಶ್ ಅಮೇಯ ಜೈನ್

ಕನ್ನಡ, ಹಿಂದಿ, ಇಂಗ್ಲೀಷ್, ಮಲಯಾಳಂ ಮತ್ತು ತಮಿಳಿನಲ್ಲಿ ವಿಕ್ರಾಂತ್ ರೋಣ ಬಿಡುಗಡೆಯಾಗಲಿದೆ. ಅರಬಿಕ್, ಜರ್ಮನಿ, ರಷ್ಯಾ, ಮ್ಯಾಂಡರಿನ್ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯೂ ಇದೆ. ಭಾರತೀಯ ಎಲ್ಲಾ ಭಾಷೆಗಳಲ್ಲಿ ವಿಕ್ರಾಂತ್ ರೋಣ ಬಿಡುಗಡೆ ಮಾಡುವ ಪ್ಲಾನ್ ಇದೆ. ಕನ್ನಡ ಆವೃತ್ತಿಗೆ ಆದ್ಯತೆ ನೀಡಲಾಗುವುದು, ಪ್ರದರ್ಶನಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಯೋಗಿ ಮಾಹಿತಿ ನೀಡಿದರು. 

ವಿದೇಶಗಳಲ್ಲಿ ಪ್ರತಿಕ್ರಿಯೆ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಲಾಗುವುದು, ಎರಡು ವಾರಗಳ ನಂತರ ಮ್ಯಾಂಡರಿನ್ ಭಾಷೆಯಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಯೋಗೀಶ್ ತಿಳಿಸಿದರು. ಸುದೀಪ್ ಅವರೊಂದಿಗೆ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ, ನೀತಾ ಅಶೋಕ್ ಮತ್ತಿತರರು ವಿಕ್ರಾಂತ್ ರೋಣ ಚಿತ್ರದಲ್ಲಿ ಅಭಿನಯಿಸಿದ್ದಾರೆ. 

ಈ ಮಧ್ಯೆ, ಮುಂದಿನ ಲಿರಿಕಲ್ ವಿಡಿಯೋ ಸಾಂಗ್.. ಹೈ ಫಕೀರಾ ನಾಳೆ ಬಿಡುಗಡೆಯಾಗಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದ ಈ ಸಾಂಗ್ ಗೆ ಅನೂಪ್ ಭಂಡಾರಿ ಅವರ ಸಾಹಿತ್ಯವಿದೆ. ವಿಲ್ಲಿಯಂ ಡೇವಿಡ್ ಅವರ ಛಾಯಾಗ್ರಾಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT