ಗಣೇಶ್ 
ಸಿನಿಮಾ ಸುದ್ದಿ

'ಇಸ್ಮಾರ್ಟ್ ಜೋಡಿ' ರಿಯಾಲಿಟಿ ಶೋ ಮೂಲಕ ಮತ್ತೆ ಕಿರುತೆರೆಗೆ ಗೋಲ್ಡನ್ ಸ್ಟಾರ್ ಗಣೇಶ್ ಎಂಟ್ರಿ!

ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಣೆ ಮಾಡುತ್ತಿರುವ 'ಇಸ್ಮಾರ್ಟ್ ಜೋಡಿ' ಸೆಲೆಬ್ರಿಟಿ ಕಪಲ್ಸ್ ಶೋ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಣೆ ಮಾಡುತ್ತಿರುವ 'ಇಸ್ಮಾರ್ಟ್ ಜೋಡಿ' ಸೆಲೆಬ್ರಿಟಿ ಕಪಲ್ಸ್ ಶೋ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈ ಶೋ ಪ್ರಸಾರವಾಗಲಿದ್ದು, ಜುಲೈ 16 ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9 ರಿಂದ 10.30ರ ತನಕ 'ಇಸ್ಮಾರ್ಟ್ ಜೋಡಿ' ಪ್ರಸಾರವಾಗಲಿದೆ.

ಇದುವರೆಗೂ ಮನರಂಜನೆಯ ಮತ್ತು ಸ್ನೇಹದ ಕುರಿತಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುವ ಗಣೇಶ್ ಈಗ ಮೊದಲ ಬಾರಿಗೆ ಸೆಲೆಬ್ರಿಟಿ ಜೋಡಿಗಳ ಕುರಿತಾಗಿ ಒಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಇಸ್ಮಾರ್ಟ್ ಜೋಡಿ’ ಕಾರ್ಯಕ್ರಮದಲ್ಲಿ ಹೊಸದಾಗಿ ಮದುವೆಯಾದವರಿಂದ 40 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರವರೆಗೂ 10 ಜೋಡಿಗಳು ಭಾಗವಹಿಸುತ್ತಿವೆ. ‘ಇವತ್ತಿನ ದಿನಗಳಲ್ಲಿ ದಂಪತಿಗಳು ಸಣ್ಣಸಣ್ಣ ವಿಷಯಕ್ಕೂ ಬಹಳ ಬೇಗ ದೂರ ಆಗುವ ಸುದ್ದಿ ಕೇಳುತ್ತಿರುತ್ತೇವೆ. ಜೀವನ ಎಂದರೆ ಅದಲ್ಲ. ಇಲ್ಲಿ ಏಳುಬೀಳು, ಸುಖ-ಸಂತೋಷ ಎಲ್ಲವೂ ಇರುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಇದಾಗಿದೆ.

ಗಣೇಶ್ ಪ್ರೀತಂ ಗುಬ್ಬಿ ನಿರ್ದೇಶನದ ರೊಮ್ಯಾಂಟಿಕ್ ಸಿನಿಮಾ ಬಾನ ದಾರಿಯಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಚಿತ್ರಕ್ಕೆ ಛಾಯಾಗ್ರಾಹಕಿ ಪ್ರೀತಾ ಜಯರಾಮನ್ ಕಥೆ ಬರೆದಿದ್ದಾರೆ. ಇದರಲ್ಲಿ ರುಕ್ಮಿಣಿ ವಸಂತ್ ಮತ್ತು ರೀಷ್ಮಾ ನಾಣಯ್ಯ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು, ಅಭಿಲಾಷ್ ಕಲಾತಿ ಛಾಯಾಗ್ರಹಣವನ್ನು ನಿಭಾಯಿಸುತ್ತಿದ್ದಾರೆ. ಮಹೇಶ್ ಗೌಡ ನಿರ್ದೇಶನದ ಟ್ರಿಬಲ್ ರೈಡಿಂಗ್ ಬಿಡುಗಡೆಗೆ ಗಣೇಶ್ ಕೂಡ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT