ಅವಿನಾಶ್ ದಾಸ್ 
ಸಿನಿಮಾ ಸುದ್ದಿ

ಬಂಧಿತ ಅಧಿಕಾರಿಯೊಂದಿಗೆ ಕೇಂದ್ರ ಸಚಿವ ಅಮಿತ್ ಶಾ ಫೋಟೋ ಹಂಚಿಕೊಂಡಿದ್ದ ಚಿತ್ರ ನಿರ್ದೇಶಕನ ಬಂಧನ!

ಬಂಧಿತ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇರುವ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಪ್ರಕರಣದಲ್ಲಿ ಗುಜರಾತ್ ಪೊಲೀಸರು ಮಂಗಳವಾರ ಮುಂಬೈನಿಂದ ಚಲನಚಿತ್ರ ನಿರ್ದೇಶಕ ಅವಿನಾಶ್ ದಾಸ್ ಅವರನ್ನು ಬಂಧಿಸಿದ್ದಾರೆ.

ಅಹಮದಾಬಾದ್: ಬಂಧಿತ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇರುವ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಪ್ರಕರಣದಲ್ಲಿ ಗುಜರಾತ್ ಪೊಲೀಸರು ಮಂಗಳವಾರ ಮುಂಬೈನಿಂದ ಚಲನಚಿತ್ರ ನಿರ್ದೇಶಕ ಅವಿನಾಶ್ ದಾಸ್ ಅವರನ್ನು ಬಂಧಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಅವರನ್ನು ಅಹಮದಾಬಾದ್‌ಗೆ ಕರೆತರಲಾಗಿದೆ  ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ನಾವು ಮಂಗಳವಾರ ಮುಂಬೈನಿಂದ ದಾಸ್ ಅವರನ್ನು ಬಂಧಿಸಿದ್ದೇವೆ. ಮುಂದಿನ ಕಾನೂನು ಪ್ರಕ್ರಿಯೆಗಾಗಿ ಅವರನ್ನು ನಮ್ಮ ತಂಡವು ಅಹಮದಾಬಾದ್‌ಗೆ ಕರೆತರುತ್ತಿದೆ' ಎಂದು ನಗರ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಡಿ ಪಿ ಚುಡಾಸಮಾ ತಿಳಿಸಿದ್ದಾರೆ.

ಅಹಮದಾಬಾದ್ ಕ್ರೈಂ ಬ್ರಾಂಚ್ ಮುಂಬೈ ಮೂಲದ ಚಲನಚಿತ್ರ ನಿರ್ದೇಶಕರ  ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 469 (ನಕಲಿ) ಜೊತೆಗೆ ರಾಷ್ಟ್ರೀಯ ಗೌರವ ಕಾಯಿದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅವಮಾನಗಳ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಅವರ ಇನ್ಸ್ ಟಾ ಮತ್ತು ಫೇಸ್ ಬುಕ್ ಖಾತೆಗಳಲ್ಲಿ ರಾಷ್ಟ್ರಧ್ವಜವನ್ನು ಧರಿಸಿರುವ ಮಹಿಳೆಯ ಫೋಟೋವನ್ನೂ ಪೋಸ್ಟ್ ಮಾಡಲಾಗಿದೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಸಿಂಘಾಲ್ ಅವರು ಅಮಿತ್ ಶಾಗೆ ಏನೋ ಪಿಸುಗುಟ್ಟುತ್ತಿರುವ ಫೋಟೋವನ್ನು ಹಂಚಿಕೊಂಡ ನಂತರ  ದಾಸ್ ವಿರುದ್ಧ ಜೂನ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಎಫ್‌ಐಆರ್‌ನ ಪ್ರಕಾರ, ಫೋಟೋದ ಶೀರ್ಷಿಕೆಯಲ್ಲಿ  ದಾಸ್ ಅವರು ಸಿಂಘಾಲ್ ಅವರ ಬಂಧನಕ್ಕೆ ಕೆಲವು ದಿನಗಳ ಮೊದಲು ಚಿತ್ರ ತೆಗೆಯಲಾಗಿದೆ ಎಂದು ಹೇಳಿದ್ದರು. ಆದರೆ ಅದನ್ನು ವಾಸ್ತವವಾಗಿ 2017 ರಲ್ಲಿ ತೆಗೆದುಕೊಳ್ಳಲಾಗಿದೆ. ಅಮಿತ್ ಶಾ ಅವರ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಕ್ರೈಂ ಬ್ರಾಂಚ್ ಆರೋಪಿಸಿತ್ತು.

ರಾಷ್ಟ್ರಧ್ವಜವನ್ನು ಧರಿಸಿರುವ ಮಹಿಳೆಯ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಖಾತೆಗಳಲ್ಲಿ ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಗೌರವವನ್ನು ಅವಮಾನಿಸಿದ ಆರೋಪದ ಮೇಲೆ ಚಿತ್ರ ನಿರ್ದೇಶಕ ದಾಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸ್ವರಾ ಭಾಸ್ಕರ್, ಸಂಜಯ್ ಮಿಶ್ರಾ ಮತ್ತು ಪಂಕಜ್ ತ್ರಿಪಾಠಿ ನಟಿಸಿದ 2017 ರ ಚಲನಚಿತ್ರ 'ಅನಾರ್ಕಲಿ ಆಫ್ ಆರಾಹ್' ಮತ್ತು 2021 ರಲ್ಲಿ ಬಿಡುಗಡೆಯಾದ 'ರಾತ್ ಬಾಕಿ ಹೈ' ಅನ್ನು ಅವಿನಾಶ್ ದಾಸ್ ನಿರ್ದೇಶಿಸಿದ್ದಾರೆ. ಅವರು 'ಶೀ' ಎಂಬ ನೆಟ್‌ಫ್ಲಿಕ್ಸ್ ಸರಣಿಯನ್ನು ಸಹ ನಿರ್ದೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT