ಯಶ್ 
ಸಿನಿಮಾ ಸುದ್ದಿ

ರಿಮೇಕ್ ಆಗಲಿದೆ ಯಶ್ ಅಭಿನಯದ ಸೂಪರ್ ಹಿಟ್ ಚಿತ್ರ ‘ಗೂಗ್ಲಿ’

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಸೂಪರ್‌ಹಿಟ್ ಕನ್ನಡ ಚಿತ್ರ ಗೂಗ್ಲಿ ಬೇರೆ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಲಿದೆ.

ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಸೂಪರ್‌ಹಿಟ್ ಕನ್ನಡ ಚಿತ್ರ ಗೂಗ್ಲಿ ಬೇರೆ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಲಿದೆ.

ಕೆಜಿಎಫ್ 2 ಚಿತ್ರದ ಅದ್ಭುತ ಯಶಸ್ಸಿನ ನಂತರ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ. ಕೆಜಿಎಫ್ 2 ಕ್ಕಿಂತ ಮುಂಚೆಯೇ ಯಶ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಯಶಸ್ವಿ ಚಿತ್ರಗಳಲ್ಲಿ ಗೂಗ್ಲಿ ಕೂಡ ಒಂದು. ಕನ್ನಡ ಭಾಷೆಯಲ್ಲಿ ತಯಾರಾಗಿ ಬಾಕ್ಸ್ ಆಫೀಸ್‌ನಲ್ಲಿ ಸೂಪರ್ ಹಿಟ್ ಆಗಿದ್ದ ಯಶ್ ಅಭಿನಯದ ‘ಗೂಗ್ಲಿ’ ಸಿನಿಮಾ ಈಗ ರಿಮೇಕ್ ಆಗುತ್ತಿದೆ.

ನಿರ್ಮಾಪಕ ಮಹೇಶ್ ದನ್ನವರ್ ಅವರು ಈ ಚಿತ್ರವನ್ನು ಬೇರೆ ಬೇರೆ ಭಾಷೆಗಳಿಗೆ ರಿಮೇಕ್ ಮಾಡಲು ನಿರ್ಧರಿಸಿದ್ದಾರೆ. ಈ ಸೂಪರ್‌ಹಿಟ್ ಚಿತ್ರದ ರಿಮೇಕ್ ಹಕ್ಕುಗಳನ್ನು ದನ್ನವರ್ ಪಡೆದುಕೊಂಡಿದ್ದಾರೆ.

2013 ರಲ್ಲಿ ಬಿಡುಗಡೆಯಾದ ಗೂಗ್ಲಿ ಚಿತ್ರದಲ್ಲಿ ಯಶ್ ಮತ್ತು ಕೃತಿ ಖರಬಂದ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಈಗ ಅದು ಬೇರೆ ಬೇರೆ ಭಾಷೆಗಳಲ್ಲಿ ತಯಾರಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?